newsfirstkannada.com

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು.. ಮೆಡಿಕಲ್ ಟೆಸ್ಟ್‌ಗಾಗಿ ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

Share :

Published May 7, 2024 at 8:36pm

Update May 7, 2024 at 8:46pm

    ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು

    ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು

    ಎದೆ ಉರಿ ಕಾಣಿಸಿಕೊಂಡ ಹಿನ್ನೆಲೆ ಹೆಚ್‌.ಡಿ ರೇವಣ್ಣ ವಿಕ್ಟೊರಿಯಾ ಆಸ್ಪತ್ರೆಗೆ ಶಿಫ್ಟ್

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಹಾಗೂ ಮಹಿಳೆಯ ಕಿಡ್ನಾಪ್‌ ಕೇಸ್‌ನಲ್ಲಿ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರಿಗೆ ಆರೋಗ್ಯದ ಸಮಸ್ಯೆ ಎದುರಾಗಿದೆ. ಎಸ್‌ಐಟಿ ವಶದಲ್ಲಿರುವ ಹೆಚ್‌.ಡಿ ರೇವಣ್ಣ ಅವರನ್ನು ಅಧಿಕಾರಿಗಳು ಮೆಡಿಕಲ್ ಟೆಸ್ಟ್‌ಗೆ ಕರೆದುಕೊಂಡು ಹೋಗಿದ್ದಾರೆ.

ಹೆಚ್‌.ಡಿ ರೇವಣ್ಣ ಅವರು ಮಧ್ಯಾಹ್ನದಿಂದ ಹೊಟ್ಟೆ ಉರಿ ಹಾಗೂ ಎದೆನೋವು ಎನ್ನುತ್ತಿದ್ದರು. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದಿದ್ದರು. ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್ ಮಾಡಿದ ಬಳಿಕ ರೇವಣ್ಣ ಅವರಿಗೆ ಎದೆ ಉರಿ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆ ವಿಕ್ಟೊರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಚ್‌.ಡಿ ರೇವಣ್ಣ ಅವರಿಗೆ ಎಸ್‌ಐಟಿ ಅಧಿಕಾರಿಗಳು ನುರಿತ ವೈದ್ಯರಿಂದ ಮತ್ತೊಂದು ಸುತ್ತಿನ ಚಿಕಿತ್ಸೆ ನೀಡುತ್ತಿದ್ದಾರೆ. ಡಾಕ್ಟರ್ ಟೆಸ್ಟಿಂಗ್ ಮಾಡಿದ ಬಳಿಕ ಹೆಚ್‌.ಡಿ ರೇವಣ್ಣ ಅವರನ್ನು ಅಡ್ಮಿಟ್ ಮಾಡಬೇಕಾ? ಬೇಡ್ವಾ ಅನ್ನೋದನ್ನ ಅಧಿಕಾರಿಗಳು ನಿರ್ಧಾರ ಮಾಡಲಿದ್ದಾರೆ.

ಇದನ್ನೂ ಓದಿ: ‘ಹಾಸನ ಸೆಕ್ಸ್​​ ವಿಡಿಯೋ ಪೆನ್​ಡ್ರೈವ್​​ಗೆ ತುಂಬಿ ಹಂಚಿದ್ದು ಇವರೇ’- ಇಂಚಿಂಚೂ ಮಾಹಿತಿ ಬಿಚ್ಚಿಟ್ಟ HDK 

ಹೆಚ್‌.ಡಿ ರೇವಣ್ಣ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿರುವುದರಿಂದ ಆಸ್ಪತ್ರೆಯ ಸುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಜಯನಗರ ಎಸಿಪಿ‌ ನಾರಾಯಣಸ್ವಾಮಿ, ವಿವಿಪುರಂ ಎಸಿಪಿ ಶಾಮಿದ್ ಬಾಷಾ ನೇತೃತ್ವದಲ್ಲಿ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ಹೆಚ್ಚುವರಿ ಬ್ಯಾರಿಕೇಡ್ ತರಿಸಿದ್ದಾರೆ.

ಮಹಿಳೆಯ ಕಿಡ್ನಾಪ್ ಕೇಸ್‌ನಲ್ಲಿ ಬಂಧನದಲ್ಲಿರುವ ಹೆಚ್‌.ಡಿ ರೇವಣ್ಣ ಅವರ ಜಾಮೀನು ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಜನಪ್ರತಿನಿಧಿ ಕೋರ್ಟ್‌ನಲ್ಲಿ ರೇವಣ್ಣ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ನಾಳೆ ಜೈಲಾ? ಬೇಲಾ ಅನ್ನೋದು ನಿರ್ಧಾರವಾಗಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು.. ಮೆಡಿಕಲ್ ಟೆಸ್ಟ್‌ಗಾಗಿ ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

https://newsfirstlive.com/wp-content/uploads/2024/05/hd-revanna6.jpg

Load More