newsfirstkannada.com

BREAKING: ಪ್ರಜ್ವಲ್‌ ಪ್ರತ್ಯಕ್ಷವಾಗುತ್ತಿದ್ದಂತೆ ಭವಾನಿ ರೇವಣ್ಣಗೆ ಬಂಧನದ ಭೀತಿ; ಮುಂದೇನು?

Share :

Published May 27, 2024 at 5:27pm

    ಭವಾನಿ ರೇವಣ್ಣಗೆ ಮೂರು ಬಾರಿ ನೋಟಿಸ್ ನೀಡಿರುವ ಎಸ್‌ಐಟಿ

    ಬೆಂಗಳೂರಿನ ಸೆಷನ್ಸ್ ಕೋರ್ಟ್​ಗೆ ಭವಾನಿ ರೇವಣ್ಣ ಅರ್ಜಿ ಸಲ್ಲಿಕೆ

    ಭವಾನಿ ರೇವಣ್ಣ ಅವರಿಗೂ ಬಂಧನದ ಭೀತಿ ಎದುರಾಗಿದ್ದು ಯಾಕೆ?

ಬೆಂಗಳೂರು: ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರು ಕೊನೆಗೂ SIT ವಿಚಾರಣೆಗೆ ಹಾಜರಾಗುವ ಮಾತನಾಡಿದ್ದಾರೆ. ವಿದೇಶದಿಂದಲೇ ವಿಡಿಯೋ ರಿಲೀಸ್ ಮಾಡಿರೋ ಪ್ರಜ್ವಲ್ ರೇವಣ್ಣ ಇದೇ ಮೇ 31ರಂದು ವಾಪಸ್ ಬಂದು ತನಿಖೆಗೆ ಸಹಕಾರ ನೀಡುತ್ತೇನೆ ಎಂದಿದ್ದಾರೆ.

ಪ್ರಜ್ವಲ್ ರೇವಣ್ಣ ಅವರು ಪ್ರತ್ಯಕ್ಷವಾಗುತ್ತಿದ್ದಂತೆ ಮಾಜಿ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರಿಗೂ ಬಂಧನದ ಭೀತಿ ಎದುರಾಗಿದೆ. ಬೆಂಗಳೂರಿನ ಸೆಷನ್ಸ್ ಕೋರ್ಟ್​ಗೆ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ‘ನಾನು ಡಿಪ್ರೆಶನ್‌ಗೆ ಹೋಗಿ ಐಸೋಲೇಷನ್‌ಗೆ ಒಳಗಾಗಿದ್ದೆ’- ಪ್ರಜ್ವಲ್​ ರೇವಣ್ಣ ವಿಡಿಯೋದಲ್ಲಿ ಹೇಳಿದ್ದೇನು? 

ಕೆ.ಆರ್ ನಗರ ಮೂಲದ ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಹೆಚ್‌.ಡಿ ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿತ್ತು. ಇದೇ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಮೂರು ಬಾರಿ ನೋಟಿಸ್ ನೀಡಲಾಗಿತ್ತು.

ಭವಾನಿ ರೇವಣ್ಣ ಅವರಿಗೂ ಬಂಧನದ ಭೀತಿ ಎದುರಾಗಿರುವುದರಿಂದ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ವಕೀಲ ಗಿರೀಶ್​ಕುಮಾರ್ ಅವರ ಮೂಲಕ ಬೆಂಗಳೂರಿನ ಸೆಷನ್ಸ್ ಕೋರ್ಟ್​ಗೆ CRPC 438 ಅಡಿಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಪ್ರಜ್ವಲ್‌ ಪ್ರತ್ಯಕ್ಷವಾಗುತ್ತಿದ್ದಂತೆ ಭವಾನಿ ರೇವಣ್ಣಗೆ ಬಂಧನದ ಭೀತಿ; ಮುಂದೇನು?

https://newsfirstlive.com/wp-content/uploads/2023/12/HD-Revanna_Bhavani.jpg

Load More