newsfirstkannada.com

ಅಮೆರಿಕ, ರಷ್ಯಾ, ಚೀನಾ ಬಳಿಕ ಚಂದ್ರನ ಮೇಲೆ ರೋವರ್ ಇಳಿಸಿದ ಸಾಧನೆ ಭಾರತದ್ದು; ಹೆಚ್​ಡಿಕೆ

Share :

23-08-2023

    ಚಂದ್ರನ ಅಂಗಳದಲ್ಲಿ ಮಹತ್ವದ ಹೆಜ್ಜೆ ಇಟ್ಟ ವಿಕ್ರಮ್​ ಲ್ಯಾಂಡರ್

    ವಿಕ್ರಮ್​​ ಲ್ಯಾಂಡಿಂಗ್ ಕ್ಷಣವನ್ನು ಕಣ್ತುಂಬಿಕೊಂಡ ಇಡೀ ವಿಶ್ವ

    ಭಾರತದ ಸಾಧನೆಯನ್ನು ಕೊಂಡಾಡಿದ ಮಾಜಿ ಸಿಎಂ ಹೆಚ್​​ಡಿಕೆ

ಬೆಂಗಳೂರು: ಚಂದ್ರಯಾನ-3 ಯಶಸ್ವಿಯಾಗಿ ಪೂರೈಸಿ ಭಾರತದ ಬಗ್ಗೆ ಜಗತ್ತೇ ನಿಬ್ಬೆರಗಾಗುವಂತೆ ಮಾಡಿದ ಇಸ್ರೋ ವಿಜ್ಞಾನಿಗಳನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಭಿನಂದಿಸಿದ್ದಾರೆ.

ಭಾರತ ವಿಕ್ರಮ ಸಾಧಿಸಿದೆ. ನಮೆಲ್ಲರ ಕನಸು ನನಸಾಗಿದೆ, ನೂರಾ ಇಪ್ಪತ್ತೈದು ಕೋಟಿ ಭಾರತೀಯರ ನಿರೀಕ್ಷೆ ನಿಜವಾಗಿದೆ. ಇಸ್ರೋ ನಮ್ಮ ಹೆಮ್ಮೆ. ಜಗತ್ತಿನಲ್ಲಿಯೇ ಪ್ರಥಮವಾಗಿ ರೋವರ್ (ವಿಕ್ರಮ ಲ್ಯಾಂಡರ್)ಅನ್ನು ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿಸುವ ಮೂಲಕ ಚಂದ್ರಯಾನ-3 ಮಹಾನ್ ಸಾಹಸವನ್ನು ಇಸ್ರೋ ಪೂರೈಸಿದೆ ಎಂದರು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ.

ಇನ್ನು, ಇದು ಖಗೋಳ ಸಂಶೋಧನೆಗೆ ನಿರ್ಣಾಯಕ ತಿರುವು ಕೊಟ್ಟಿದೆ. ಇಸ್ರೋ ವಿಜ್ಞಾನಿಗಳ ಈ ಸಾಧನೆಯನ್ನು ಕೇವಲ ಪದಗಳಿಂದ ಬಣ್ಣಿಸಿದರೆ ಸಾಲದು. ಹಗಲಿರುಳು ಶ್ರಮಿಸಿದ ಅವರ ಯಶಸ್ಸನ್ನು, ಅರ್ಪಣಾ ಮನೋಭಾವವನ್ನು ಹೃದಯಪೂರ್ವಕವಾಗಿ ಕೊಂಡಾಡಿ ಗೌರವಿಸೋಣ ಎಂದರು.

ಅಮೆರಿಕ, ರಷ್ಯಾ, ಚೀನಾ ನಂತರ ಚಂದ್ರನ ಮೇಲೆ ರೋವರ್ ಇಳಿಸಿದ ಈ ಸಾಧನೆ ಐತಿಹಾಸಿಕ. ಇಸ್ರೋದ ಈ ಪಯಣ ನನಗೆ ರೋಮಾಂಚನ ಉಂಟು ಮಾಡಿದೆ. ಸಂಸ್ಥೆಯ ಅಧ್ಯಕ್ಷರಾದ ಡಾ. ಸೋಮನಾಥ್ ಸೇರಿದಂತೆ ಅವರ ತಂಡದ ಎಲ್ಲಾ ವಿಜ್ಞಾನಿಗಳು, ತಾಂತ್ರಿಕ ನಿಪುಣರು, ಮತ್ತಿತರರಿಗೆ ನನ್ನ ಅಭಿನಂದನೆಗಳು ಎಂದು ಕೊಂಡಾಡಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅಮೆರಿಕ, ರಷ್ಯಾ, ಚೀನಾ ಬಳಿಕ ಚಂದ್ರನ ಮೇಲೆ ರೋವರ್ ಇಳಿಸಿದ ಸಾಧನೆ ಭಾರತದ್ದು; ಹೆಚ್​ಡಿಕೆ

https://newsfirstlive.com/wp-content/uploads/2023/08/HDK.jpg

Load More