newsfirstkannada.com

ಬೆಂಗಳೂರಲ್ಲಿ ಭಾರೀ ಸ್ಫೋಟಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರು ಅರೆಸ್ಟ್​​​; ಈ ಬಗ್ಗೆ HDK ಏನಂದ್ರು?

Share :

19-07-2023

    ಬೆಂಗಳೂರಲ್ಲಿ ಭಾರೀ ಸ್ಫೋಟಕ್ಕೆ ಸಂಚು ಆರೋಪ

    ಐವರು ಶಂಕಿತ ಉಗ್ರರು ಬಂಧಿಸಿದ ಸಿಸಿಬಿ ಪೊಲೀಸ್​​​

    ಕಾನೂನು ಸುವ್ಯವಸ್ಥೆ ಬಿಗಿ ಮಾಡಿ ಎಂದು HDK ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಹಾದಿ ಬೀದಿಯಲ್ಲಿ ಕೊಲೆಗಳಾಗುತ್ತಿವೆ. ಇನ್ನು ಕಾನೂನು ಸುವ್ಯವಸ್ಥೆ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದ್ದಾರೆ.

ಇಂದು ನಗರದಲ್ಲಿ ಶಂಕಿತ ಉಗ್ರರನ್ನು ಬಂಧಿಸಿದ ಘಟನೆಗೆ ಸಂಬಂಧಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಹೆಚ್​​ಡಿಕೆ, ಅನಾಹುತ ಆಗುವ ಮುನ್ನವೇ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಶಂಕಿತ ಭಯೋತ್ಪಾದಕರನ್ನು ಹಿಡಿದ ನಮ್ಮ ಪೊಲೀಸ್ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ. ಇಂತಹ ಸೂಕ್ಷ್ಮ ವಿಚಾರದಲ್ಲಿ ಅವರು ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದರು.

ಸರ್ಕಾರ ಕೂಡ ಈ ಬಗ್ಗೆ ಹೆಚ್ಚು ಗಮನ ಕೊಡಬೇಕು. ಕಾನೂನು ಸುವ್ಯವಸ್ಥೆ ಬಗ್ಗೆ ಬಹಳಷ್ಟು ಕಾಳಜಿ ವಹಿಸಬೇಕು. ಇತ್ತೀಚೆಗೆ ರಸ್ತೆಗಳಲ್ಲಿಯೇ ಕೊಲೆಗಳಾಗ್ತಿವೆ. ಜನರಿಗೆ ಆತಂಕ ಎದುರಾಗಿದೆ. ಕೂಡಲೇ ಸರ್ಕಾರ ಇಂತಹ ಘಟನೆಗಳು ನಡೆಯದಂತೆ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯ ಮಾಡಿದರು.

ಇನ್ನು, ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಜನರು ನೆಮ್ಮದಿಯಿಂದ ಬದುಕುವಂತಹ ವಾತಾವರಣ ನಿರ್ಮಾಣ ಮಾಡಬೇಕು ಎಂದು ಸರ್ಕಾರಕ್ಕೆ ಸಲಹೆ ಮಾಡಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರಲ್ಲಿ ಭಾರೀ ಸ್ಫೋಟಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರು ಅರೆಸ್ಟ್​​​; ಈ ಬಗ್ಗೆ HDK ಏನಂದ್ರು?

https://newsfirstlive.com/wp-content/uploads/2023/07/HDK_EX-CM.jpg

Load More