newsfirstkannada.com

ಹೌದು, ನಾನೇ ಸಿದ್ದರಾಮಯ್ಯಗೆ ವಿಲನ್! ಏನಿವಾಗ..?- HDK ಖಡಕ್​​​ ಪ್ರಶ್ನೆ

Share :

26-10-2023

    ‘ನಾನೇ ಸಿದ್ದರಾಮಯ್ಯಗೆ ರಾಜಕೀಯವಾಗಿ ವಿಲನ್’

    ವಿಲನ್ ಆಗದೇ ಸ್ನೇಹಿತನಾಗಲು ಸಾಧ್ಯವೇ ಎಂದ ಹೆಚ್​ಡಿಕೆ!

    ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್​​ಡಿಕೆ ಭಾರೀ ಆಕ್ರೋಶ

ಬೆಂಗಳೂರು: ಹೌದು, ನಾನು ಸಿದ್ದರಾಮಯ್ಯಗೆ ರಾಜಕೀಯವಾಗಿ ವಿಲನ್ ಏನಿವಾಗ..? ಅವರಿಗೆ ನಾನು ವಿಲನ್ ಆಗದೇ ಸ್ನೇಹಿತ ಆಗಲು ಸಾಧ್ಯವೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇರ ಮಾತುಗಳಲ್ಲಿ ಪ್ರಶ್ನಿಸಿದರು.

ತಾಜ್ ನಲ್ಲಿ ಇದ್ದೆ ಅಂತ ಪದೇ ಪದೇ ಹೇಳ್ತಾರೆ. ತಾಜ್ ನಲ್ಲಿ ನಾನು ಮೋಜು ಮಸ್ತಿ ಮಾಡ್ತಿರಲಿಲ್ಲ. ಅಭಿವೃದ್ಧಿ ಕೆಲಸದ ಚರ್ಚೆ ಮಾಡ್ತಿದ್ದೆ. ನನ್ನ ಬಳಿ ಎಲ್ಲಾ ದಾಖಲಾತಿ ಇದೆ ಎಂದು ಅವರು ಟಾಂಗ್ ನೀಡಿದರು.

ನನ್ನನ್ನು ಕಾಂಗ್ರೆಸ್ ನಾಯಕರು ಸಿಎಂ ಎನ್ನುವ ಗೌರವ ಇಲ್ಲದೆ ಪಪೇಟ್ ರೀತಿಯಲ್ಲಿ ನಡೆಸಿಕೊಂಡು ಅಪಮಾನ ಮಾಡಿದರು. ನಾನು ಸಿಎಂ ಆದಾಗ ಕಾಂಗ್ರೆಸ್ ಶಾಸಕರು ಇಸ್ಪೀಟ್ ಎಲೆ ಎಸೆದ ಹಾಗೆ ಅವರ ಅಹವಾಲುಗಳನ್ನು ನನ್ನ ಟೇಬಲ್ ಮೇಲೆ ಎಸೆಯುತ್ತಿದ್ದರು. ಅಂತಹವರು ನನ್ನ ಬಗ್ಗೆ ವಿಲನ್ ಎಂದು ಹೇಳುತ್ತಿದ್ದಾರೆ ಎಂದು ತಿರುಗೇಟು ಕೊಟ್ಟರು ಕುಮಾರಸ್ವಾಮಿ.

ಸರಕಾರ ಬೀಳಿಸಿದ್ದ ಸಿದ್ದರಾಮಯ್ಯ:

ನನ್ನ ನೇತೃತ್ವದ ಸಮ್ಮಿಶ್ರ ಸರ್ಕಾರ ಬೀಳಿಸಿದ್ದು ಸಿದ್ದರಾಮಯ್ಯ ಅವರೇ. ಇದರಲ್ಲಿ ಎರಡು ಮಾತಿಲ್ಲ. ಬಿಜೆಪಿ‌ಯವರು ಸರ್ಕಾರ ಬೀಳಿಸಿದ್ದರು ಅಂತ ಹೇಳಿದ್ದೆ. ಆದರೆ ಅದಕ್ಕೆ ಬಿತ್ತನೆ ಹಾಕಿದ್ದು ಇದೇ ಸಿದ್ದರಾಮಯ್ಯ ಎಂದ ಅವರು ರಮೇಶ್ ಜಾರಕಿಹೋಳಿ ಯಾರು? ಅವರಿಗೂ ನನಗೂ ಯಾವ ಶತ್ರುತ್ವ ಇತ್ತಾ? ಬೆಳಗಾವಿ ರಾಜಕೀಯ ಸರಿ ಮಾಡಿ ಎಂದು ನಾನು ಇವರಿಗೆ ಹೇಳಿದೆ. ಇವರು ಸರಕಾರ ಬಿದ್ದು ಹೋಗಲಿ ಎಂದು ಸುಮ್ಮನಿದ್ದರು. ಆಗ ಬಿಜೆಪಿ‌ ಜತೆ ಕೈ ಜೋಡಿಸಿದ್ದು ಸಿದ್ದರಾಮಯ್ಯ. ಅದಕ್ಕೆ ‌ಸಮ್ಮಿಶ್ರ ಸರಕಾರ ಬಿದ್ದು ಹೋಯಿತು ಎಂದು ಅವರು ನೇರ ಆರೋಪ ಮಾಡಿದರು.

ಇಬ್ಬರು ಪಕ್ಷೇತರ ಶಾಸಕರನ್ನು ಮಂತ್ರಿ ಮಾಡಿಸಿದ್ದು ಸಿದ್ದರಾಮಯ್ಯ. ಬಿ.ಸಿ.ಪಾಟೀಲ್ ಅವರನ್ನು ಮಂತ್ರಿ ಮಾಡಲು ಹೇಳಿದ್ದೆ. ಆದರೆ‌ ಸಿದ್ದರಾಮಯ್ಯ ಮಾಡಲಿಲ್ಲ. ನನ್ನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಶ್ರೀಮಂತ ಪಾಟೀಲ್, ಆರ್.ಶಂಕರ್ ಅವರನ್ನು ರೆಸಾರ್ಟ್ ನಿಂದ ಕಳಿಸಿದ್ದು ಇದೇ ಸಿದ್ದರಾಮಯ್ಯ ಎಂದು ಟೀಕಾ ಪ್ರಹಾರ ನಡೆಸಿದ ಅವರು; ಅಪ್ಪ ನಿಮಗೊಂದು ನಮಸ್ಕಾರ. 14 ತಿಂಗಳು ನನ್ನನ್ನ ಅಧಿಕಾರದಲ್ಲಿ ಇಟ್ಟಿದ್ದಕ್ಕೆ ನಮೋ ನಮಃ. ಜನರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಎಂದು ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದರು ಅವರು.

ಗೃಹಲಕ್ಷ್ಮಿ ರಾಜಸ್ಥಾನದಲ್ಲಿ ಯಾಕೆ 10 ಸಾವಿರ‌ ಕೊಡ್ತಿದ್ದೀರಾ? ಎಲ್ಲಾ ಕಡೆ ಗ್ಯಾರಂಟಿಗಳನ್ನು ಕೊಡುತ್ತಿದೆ ಕಾಂಗ್ರೆಸ್. ಈ ಕಾರಣಕ್ಕೆ ಎಲ್ಲ ಯೋಜನೆಗಳು ಹಳ್ಳ ಹಿಡಿದು ಹೋಗಿವೆ. ನಿಮ್ಮ ಗ್ಯಾರಂಟಿಗಳ ಬಗ್ಗೆ ಜನ ಛೀ ಥೂ ಎಂದು ಉಗಿಯೋ ಕಾಲ ಬರುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹೌದು, ನಾನೇ ಸಿದ್ದರಾಮಯ್ಯಗೆ ವಿಲನ್! ಏನಿವಾಗ..?- HDK ಖಡಕ್​​​ ಪ್ರಶ್ನೆ

https://newsfirstlive.com/wp-content/uploads/2023/08/HDK_CM_SIDDARAMAIAH.jpg

Load More