newsfirstkannada.com

‘JD(S) ಕೇವಲ ಸೋಗಲಾಡಿತನ, ಕುಮಾರಸ್ವಾಮಿಯದ್ದು ನಕಲಿ‌ ಶ್ಯಾಮನ ಅವತಾರ’- ದಿನೇಶ್ ಗುಂಡೂರಾವ್

Share :

16-07-2023

    HDK ನಮ್ಮ ಮಾತು ಸತ್ಯ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ

    BJP ಜೊತೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ

    JD (S) ಜಾತ್ಯಾತೀತ ಎಂಬ ಪದ ಕೇವಲ ಸೋಗಲಾಡಿತನವಷ್ಟೇ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ನಾಳೆ, ನಾಡಿದ್ದು ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಮಹಾಘಟಬಂಧನ್ ಸಭೆ ನಡೆಯುತ್ತಿದೆ. ಇದಕ್ಕೂ ಮುನ್ನ ರಾಜ್ಯ ರಾಜಕೀಯದಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿಗೆ ಮುಂದಾಗಬಹುದು. NDA ಮೈತ್ರಿಕೂಟದ ಜೊತೆಗೆ JDS ಹೋಗುತ್ತಾರೆ ಎಂಬುದರ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಟ್ವೀಟ್ ಮಾಡಿ ದಳಪತಿಗಳಿಗೆ ತಿರುಗೇಟು ಕೊಟ್ಟಿದ್ದಾರೆ.

ಬಿಜೆಪಿಯ B ಟೀಂ ಜೆಡಿಎಸ್ ಎಂದು ನಾವು ಅನೇಕ ಬಾರಿ ಹೇಳಿದ್ದೆವು. ಈಗ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಮಾತು ಸತ್ಯ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ. JDS ಪಕ್ಷಕ್ಕೆ ಯಾವುದೇ ತತ್ವ ಸಿದ್ಧಾಂತಗಳಿಲ್ಲ. ಕೋಮುವಾದಿ ಪಕ್ಷ BJP ಜೊತೆಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ JDSಗೆ ಯಾವ ಸಿದ್ಧಾಂತವಿದೆ. ಅದೊಂದು ಅವಕಾಶವಾದಿ ಪಕ್ಷ.‌ ಅಧಿಕಾರಕ್ಕಾಗಿ ಯಾರ ಜೊತೆಗಾದರೂ ಸೈ. ಜೆಡಿಎಸ್‌ ಮುಂದಿರುವ ಜಾತ್ಯಾತೀತ ಎಂಬ ಪದ ಕೇವಲ ಸೋಗಲಾಡಿತನವಷ್ಟೇ ಎಂದು ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ಇದನ್ನೂ ಓದಿ: WATCH: ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಪಕ್ಕಾನಾ?; HDK ಭಾವನೆಗಳಿಗೆ ಬೊಮ್ಮಾಯಿ ಕೊಟ್ರು ಸ್ಫೋಟಕ ಸುಳಿವು

ಇನ್ನು, ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು 2006ರಲ್ಲೇ BJP ಜೊತೆ ಸೇರಿ 20-20 ಸರ್ಕಾರ ಮಾಡಿದಾಗಲೇ ಜಾತ್ಯಾತೀತ ತತ್ವಕ್ಕೆ ಎಳ್ಳು‌ ನೀರು ಬಿಟ್ಟಿದ್ದರು. ಆಗಲೇ JDSನ ಅವನತಿ ಶುರುವಾಗಿದೆ. 2004ರಲ್ಲಿ 59 ಸ್ಥಾನ ಗೆದ್ದಿದ್ದ ಜೆಡಿಎಸ್ ಈ ಬಾರಿ 19 ಸ್ಥಾನಕ್ಕೆ ಕುಸಿಯಲು ಈ ನಕಲಿ ಜಾತ್ಯಾತೀತ ಸಿದ್ಧಾಂತವೇ ಕಾರಣ. ಹೆಚ್‌.ಡಿ ಕುಮಾರಸ್ವಾಮಿ ಅವರು BJPಗೆ ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿದ್ದಾರೆ. ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ. ಆಗ ತಾವೇ ಅಧಿಕೃತವಾಗಿ ವಿಪಕ್ಷ ನಾಯಕನಾಗಬಹುದು. ಈ ಮೂಲಕವಾದರೂ ಕುಮಾರಸ್ವಾಮಿಯವರ ಸುಳ್ಳು ಜಾತ್ಯಾತೀತತೆಯ ನಕಲಿ‌ ಶ್ಯಾಮನ ಅವತಾರ ಕೊನೆಯಾಗಲಿ‌ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘JD(S) ಕೇವಲ ಸೋಗಲಾಡಿತನ, ಕುಮಾರಸ್ವಾಮಿಯದ್ದು ನಕಲಿ‌ ಶ್ಯಾಮನ ಅವತಾರ’- ದಿನೇಶ್ ಗುಂಡೂರಾವ್

https://newsfirstlive.com/wp-content/uploads/2023/07/Dinesh-Gundurao-1.jpg

Load More