Advertisment

ಆರೋಗ್ಯ ಇಲಾಖೆಯಲ್ಲಿ 2,500 ಹುದ್ದೆ ಭರ್ತಿಗೆ ಕ್ರಮ: ಡಿಜಿಟಲ್ ಆರೋಗ್ಯ ಕಾರ್ಯಕ್ರಮ ಜಾರಿ

ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಜೊತೆಗೆ ರಾಜ್ಯದಲ್ಲಿ ಡಿಜಿಟಲ್ ಆರೋಗ್ಯ ಕಾರ್ಯಕ್ರಮ ಜಾರಿ ಮಾಡಲಾಗುತ್ತೆ ಎಂದು ಬಜೆಟ್ ನಲ್ಲಿ ಘೋಷಿಸಿದ್ದಾರೆ.

author-image
Chandramohan
ಕಲ್ಯಾಣ ಕರ್ನಾಟಕಕ್ಕೆ ಗುಡ್​ನ್ಯೂಸ್​.. ಖರ್ಗೆ ತವರಲ್ಲಿ ಜಯದೇವ ಆಸ್ಪತ್ರೆ ಲೋಕಾರ್ಪಣೆ; ಏನಿದರ ವಿಶೇಷ?

ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆ

Advertisment

ಆರೋಗ್ಯ  ಇಲಾಖೆಗೆ ಸಂಬಂಧಿಸಿದಂತೆ ಅನೇಕ ಮಹತ್ವದ ಘೋಷಣೆ, ಸುಧಾರಣೆಗಳನ್ನು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ರಾಜ್ಯದಲ್ಲಿ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆ ಭರ್ತಿಗೆ ಈ ವರ್ಷ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಜೊತೆಗೆ ಡಿಜಿಟಲ್ ಆರೋಗ್ಯ ಕಾರ್ಯಕ್ರಮದಡಿ ಎಲ್ಲವನ್ನೂ ಡಿಜಿಟಲ್ ನೋಂದಾಣಿ ಮಾಡುವುದಾಗಿ ಘೋಷಿಸಿದ್ದಾರೆ. 
ಆರೋಗ್ಯ ಇಲಾಖೆಯ ಬಗ್ಗೆ ಬಜೆಟ್ ನಲ್ಲಿ ಘೋಷಿಸಲಾದ ಕಾರ್ಯಕ್ರಮಗಳ ವಿವರ ಇಲ್ಲಿದೆ,ಓದಿ. 


*  ಕಳೆದ ವರ್ಷ ಪ್ರಾರಂಭಿಸಲಾದ, ತಡೆಗಟ್ಟಬಹುದಾದ ತಾಯಂದಿರ ಮರಣವನ್ನು ಶೂನ್ಯಕ್ಕೆ ಇಳಿಸುವ ಅಭಿಯಾನದ ಪರಿಣಾಮವಾಗಿ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣವು ಶೇ.24ರಷ್ಟು ಇಳಿಕೆಯಾಗಿರುತ್ತದೆ. ಈ ಅಭಿಯಾನದಡಿ ಪ್ರತಿ ತಾಯಂದಿರ ಮರಣವನ್ನು ತಜ್ಞರ ಸಮಿತಿಯಿಂದ ವಿಶ್ಲೇಷಿಸಿ ಗುಣಾತ್ಮಕವಾದ ಗರ್ಭಿಣಿ ಮತ್ತು ಪ್ರಸವ ಸೇವೆಗಳನ್ನು ನೀಡಲಾಗುತ್ತಿದೆ. ಹೆರಿಗೆ ಆಸ್ಪತ್ರೆಗಳಿಗೆ ಮಾರ್ಗದರ್ಶನ, ಹೆಚ್ಚಿನ ಮಾನವ ಸಂಪನ್ಮೂಲ ಮತ್ತು ಆಧುನಿಕ ಉಪಕರಣಗಳನ್ನು ನೀಡಲಾಗುತ್ತಿದೆ.

Advertisment

*  ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಯೋಜನೆಯಡಿ ಶಾಲಾ ಕಾಲೇಜುಗಳ 52 ಲಕ್ಷ ಮಕ್ಕಳಿಗೆ ರಕ್ತಹೀನತೆ ತಪಾಸಣೆ ನಡೆಸಲಾಗಿದೆ. ರಕ್ತಹೀನತೆ ಕಂಡುಬಂದಿರುವ 11.7 ಲಕ್ಷ ಮಕ್ಕಳಿಗೆ ಉಚಿತ ಚಿಕಿತ್ಸೆ ನೀಡಲಾಗಿದ್ದು, ಇದರಲ್ಲಿ 3.7 ಲಕ್ಷ ಮಕ್ಕಳು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಉಳಿದ ಮಕ್ಕಳಿಗೆ ಚಿಕಿತ್ಸೆ ಮತ್ತು ಅನುಸರಣೆ ಮುಂದುವರೆಸಲಾಗಿದೆ. 

*   ಹೃದಯದ ತುರ್ತು ಪರಿಸ್ಥಿತಿಗಳನ್ನು ನಿರ್ವಹಿಸಲು ST-Elevated Myocardial Infarction (STEMI) ಕಾರ್ಯಕ್ರಮದಡಿ ಒಟ್ಟು 9.4 ಲಕ್ಷ ECG ಗಳನ್ನು ಮಾಡಲಾಗಿದ್ದು, 13,933 ತೀವ್ರ ಹೃದಯಾಘಾತದ ರೋಗಿಗಳನ್ನು ಪತ್ತೆ ಹಚ್ಚಿ ಇವರಲ್ಲಿ 7,668 ರೋಗಿಗಳಿಗೆ ಚಿಕಿತ್ಸೆಯನ್ನು ನೀಡಲಾಗಿದೆ.

*  ಕಳೆದ ಮೂರು ವರ್ಷಗಳ ಅವಧಿಯಲ್ಲಿ ವಿವಿಧ ಯೋಜನೆಗಳಡಿ ಕೈಗೊಂಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾಲ್ಲೂಕು ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗಳನ್ನು ಕ್ಷಿಪ್ರಗತಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗುವುದು. ಆರೋಗ್ಯ ಇಲಾಖೆಯಲ್ಲಿನ ಮೂಲಸೌಕರ್ಯ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ 900 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.

Advertisment

*   ಆಯುಷ್ಮಾನ್‌ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಹಾಲಿ ಚಾಲ್ತಿಯಲ್ಲಿರುವ 2018ರ ಚಿಕಿತ್ಸಾ ಪ್ಯಾಕೇಜ್‌ ದರಗಳನ್ನು ಪರಿಷ್ಕರಿಸಿ ಹೆಚ್.ಬಿ.ಪಿ.-2022 ಪ್ಯಾಕೇಜ್‌ ದರಗಳನ್ನು ಜಾರಿಗೆ ತರಲು ತೀರ್ಮಾನಿಸಿದೆ. ಇದರಿಂದ ಬಡರೋಗಿಗಳಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೌಲಭ್ಯ ಸಿಗಲಿದೆ. ಇದಕ್ಕಾಗಿ 400 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಒದಗಿಸಲಾಗುವುದು. ಸದರಿ ಯೋಜನೆಯನ್ನು ಯಶಸ್ವಿನಿ, ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕಾರ್ಮಿಕ ರಾಜ್ಯ ವಿಮಾ ಯೋಜನೆ ಮತ್ತು ಅನ್ವಯಿಸುವ ಇತರ ಯೋಜನೆಗಳ ಅನುದಾನವನ್ನು ಒಗ್ಗೂಡಿಸುವ ಮೂಲಕ ಅನುಷ್ಠಾನಗೊಳಿಸಲಾಗುವುದು. 

*   ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಸಮಗ್ರ ಆಘಾತ ಆರೈಕೆ (Trauma Care) ಸೇವೆಗಳನ್ನು ಒದಗಿಸಲು ತುರ್ತು ಚಿಕಿತ್ಸಾ ವಿಭಾಗ, ಶಸ್ತ್ರಚಿಕಿತ್ಸಾ ಕೊಠಡಿ ಮತ್ತು ಐಸಿಯುಗಳಿಗೆ ವೈದ್ಯಕೀಯ ಉಪಕರಣಗಳು ಮತ್ತು ಸಾಧನಗಳನ್ನು ಹಂತ ಹಂತವಾಗಿ ಪೂರೈಸುವ ಮೂಲಕ ಮೇಲ್ದರ್ಜೆಗೇರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 45 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.

*  ತೀವ್ರತರವಾದ ಅಪೌಷ್ಟಿಕತೆಯನ್ನು (Severe Acute Malnutrition) ಹೊಂದಿರುವ ಮಕ್ಕಳಿಗೆ ವೈದ್ಯಕೀಯ ಮತ್ತು ಪೌಷ್ಟಿಕಾಂಶದ ಚಿಕಿತ್ಸೆ ನೀಡಲು ಈಗಾಗಲೇ 86 ತಾಲ್ಲೂಕುಗಳಲ್ಲಿ ಪೌಷ್ಟಿಕ ಪುನಃಶ್ಚೇತನ ಕೇಂದ್ರಗಳು (NRC) ಕಾರ್ಯನಿರ್ವಹಿಸುತ್ತಿದ್ದು, ಇದನ್ನು ಉಳಿದ 63 ತಾಲ್ಲೂಕುಗಳಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ.ಗಳನ್ನು ಒದಗಿಸಲಾಗುವುದು.

Advertisment

*   ಕಡಿಮೆ ಜನನ ತೂಕದ ಹಾಗೂ ಅನಾರೋಗ್ಯ ಪೀಡಿತ ನವಜಾತ ಶಿಶುಗಳಿಗೆ ಅಗತ್ಯವಿರುವ ವಿಶೇಷ ಔಷಧೋಪಚಾರ, ಸಮಗ್ರ ನವಜಾತ ಶಿಶು ಆರೈಕೆ ಸೌಲಭ್ಯಗಳು ಹಾಗೂ ಪ್ರಸವಪೂರ್ವ ಸೇವೆಗಳನ್ನು ಮತ್ತಷ್ಟು ಬಲಪಡಿಸಲಾಗುವುದು. ಈ ಕಾರ್ಯಕ್ರಮದ ಅನುಷ್ಠಾನಕ್ಕಾಗಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು.

*   ಟೈಪ್-1 ಮಧುಮೇಹದಿಂದ (Type-1 Diabetes) ಬಳಲುತ್ತಿರುವ 18 ವರ್ಷ ವಯಸ್ಸಿನವರೆಗಿನ ಮಕ್ಕಳ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಉಚಿತ ಇನ್ಸುಲಿನ್ ಪೆನ್ಗಳನ್ನು ನೀಡಲಾಗುವುದು.

*  ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರೋಗ್ಯ ಕ್ಷೇತ್ರವನ್ನು ಬಲವರ್ಧನೆಗೊಳಿಸಲು KKRDB ವಾರ್ಷಿಕ ಸ್ಥಳೀಯ ಯೋಜನೆಯಲ್ಲಿ (micro plan) ಆದ್ಯತೆ ಮೇರೆಗೆ ಅನುದಾನವನ್ನು ಮೀಸಲಿರಿಸಲಾಗುವುದು. 

Advertisment

*   ಗಣಿಬಾಧಿತ ಜಿಲ್ಲೆಗಳಾದ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ತುಮಕೂರಿನ ಎಲ್ಲಾ ತಾಲ್ಲೂಕುಗಳಲ್ಲಿ ಸಮಗ್ರ ಆರೋಗ್ಯ ಸೇವೆಗಳನ್ನು KMERC ಅನುದಾನದಡಿಯಲ್ಲಿ ವಿಸ್ತರಿಸಲಾಗುವುದು.‌

*  ಗಂಭೀರ, ದೀರ್ಘಕಾಲೀನ ಹಾಗೂ ಮಾರಣಾಂತಿಕ ಕಾಯಿಲೆಗಳೊಂದಿಗೆ ಬದುಕುತ್ತಿರುವ ರೋಗಿಗಳಿಗೆ ಕೇರಳ ಮಾದರಿಯಲ್ಲಿ ಗೃಹಾಧಾರಿತ ಉಪಶಮನ ಆರೈಕೆಯನ್ನು Pallium India ಸಂಸ್ಥೆಯ ಸಹಯೋಗದೊಂದಿಗೆ ನೀಡಲಾಗುವುದು.

*  ರಾಜ್ಯದಲ್ಲಿ ಬೇಡಿಕೆ ಇರುವ 50 ಕೇಂದ್ರಗಳಲ್ಲಿ 150 ಹಾಸಿಗೆ ಸಾಮರ್ಥ್ಯ ಹೆಚ್ಚಿಸುವ ಮೂಲಕ ವಾರ್ಷಿಕವಾಗಿ 1.35 ಲಕ್ಷ ಡಯಾಲಿಸಿಸ್‌ ಸೇವೆಗಳನ್ನು ಒದಗಿಸಲಾಗುವುದು. ಇದಕ್ಕಾಗಿ 20 ಕೋಟಿ ರೂ. ಅನುದಾನವನ್ನು ಮೀಸಲಿರಿಸಲಾಗಿದೆ.

Advertisment

*  ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲಾಗುವುದು.

* ಜಿಲ್ಲಾ ಆರೋಗ್ಯ ಅಧಿಕಾರಿ (DHO), ಜಿಲ್ಲಾ ಶಸ್ತ್ರಚಿಕಿತ್ಸಕರು (DS) ಇತ್ಯಾದಿ ಆಡಳಿತಾತ್ಮಕ ಹುದ್ದೆಗಳಿಗೆ ಅಧಿಕಾರಿಗಳ ನೇಮಕಾತಿಯಲ್ಲಿ ವಸ್ತುನಿಷ್ಠತೆಯನ್ನು ತರುವ ಮೂಲಕ ಸಾರ್ವಜನಿಕ ಆರೋಗ್ಯ ವೃಂದವನ್ನು (Public Health Cadre) ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು. 

*   ಡಿಜಿಟಲ್‌ ಆರೋಗ್ಯ ಕಾರ್ಯಕ್ರಮದಡಿ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು:
•    ʻಸಮಸ್ತʼ ಮೊಬೈಲ್‌ ಅಪ್ಲಿಕೇಶನ್‌ ಮೂಲಕ ಆರೋಗ್ಯ ಇಲಾಖೆಯ ಎಲ್ಲಾ ಕ್ಷೇತ್ರ ಸಿಬ್ಬಂದಿ ನಿರ್ವಹಿಸುತ್ತಿರುವ ವಹಿಗಳ ಡಿಜಿಟಲೀಕರಣ; 
•    ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ‌ ಎಲ್ಲಾ ರೋಗಿಗಳಿಗೆ ಸಂಪೂರ್ಣ ಗಣಕೀಕೃತ ನೋಂದಣಿ,  ಆರೋಗ್ಯ ದಾಖಲೆಗಳ ಡಿಜಿಟಲೀಕರಣ ಮತ್ತು ಯುಪಿಐ ಆಧಾರಿತ ಶುಲ್ಕ ಪಾವತಿ ವ್ಯವಸ್ಥೆ ಜಾರಿ;
•    ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಟೆಲಿ-ರೇಡಿಯಾಲಜಿ (Scanning) ಮತ್ತು ಟೆಲಿ-ಲೇಬರ್ ರೂಮ್‌ಗಳ (Smart Labour Room) ಅಳವಡಿಕೆ.

Advertisment

*  ಇಸ್ಕಾನ್ ಮೂಲಕ ರೋಗಿಗಳಿಗೆ ಆಹಾರ ಪೂರೈಕೆಯ ಯಶಸ್ವಿ ಮಾದರಿಯನ್ನು ರಾಜ್ಯದ ಆಯ್ದ  ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ವಿಸ್ತರಿಸಲಾಗುವುದು.

*  ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳ ಆಯ್ದ ಆಯುಷ್ ಆಸ್ಪತ್ರೆಗಳಲ್ಲಿ ಪಂಚಕರ್ಮ ಘಟಕಗಳನ್ನು ಸ್ವಾವಲಂಬಿ (self-sustaining) ಮಾದರಿಯಲ್ಲಿ ಸ್ಥಾಪಿಸಲಾಗುವುದು.

ಆರೋಗ್ಯ    ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.

ಬಡ ತಾಯಂದಿರ ತಾಯ್ತನದ ಜೊತೆ ನರ್ಸಮ್ಮ ಪಾಪದಾಟ? ‘ಮಗು ಸತ್ತಿದೆ’ ಎಂದು ನಂಬಿಸಿ ಬೇರೆಯವರಿಗೆ ಮಾರಿದ ಆರೋಪ





ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Health departments schems in state budget
Advertisment
Advertisment
Advertisment