/newsfirstlive-kannada/media/media_files/2025/10/11/deepika-padukone-met-nadda-2025-10-11-12-21-35.jpg)
ಕೇಂದ್ರದ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಭೇಟಿಯಾದ ನಟಿ ದೀಪಿಕಾ ಪಡುಕೋಣೆ
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರನ್ನು ದೇಶದ ಮೊದಲ ಮಾನಸಿಕ ಆರೋಗ್ಯದ ರಾಯಭಾರಿಯನ್ನಾಗಿ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಿಸಿದೆ. ನಟಿ ದೀಪಿಕಾ ಪಡುಕೋಣೆ ಅವರು ದೆಹಲಿಯಲ್ಲಿ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದೀಪಿಕಾ ಪಡುಕೋಣೆ ಅವರು ಲೀವ್ ಲವ್ ಮತ್ತು ಲಾಫ್ ಫೌಂಡೇಷನ್ ನ ಸ್ಥಾಪಕಿ ಕೂಡ ಆಗಿದ್ದಾರೆ. ಇತ್ತೀಚೆಗೆ ನಟಿ ದೀಪಿಕಾ ಪಡುಕೋಣೆ ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಗೆ ಭೇಟಿ ನೀಡಿ ಜನರೊಂದಿಗೆ ಮಾನಸಿಕ ಆರೋಗ್ಯದ ಬಗ್ಗೆ ಮಾತುಕತೆ ನಡೆಸಿದ್ದರು. ಇದಾದ ಬಳಿಕ ವಿಶ್ವ ಮಾನಸಿಕ ಆರೋಗ್ಯ ದಿನದಂದು ನಟಿ ದೀಪಿಕಾ ಪಡುಕೋಣೆ ಅವರನ್ನು ದೇಶದ ಮಾನಸಿಕ ಆರೋಗ್ಯದ ಅಂಬಾಸಿಡರ್ ಆಗಿ ಕೇಂದ್ರ ಸರ್ಕಾರ ನೇಮಿಸಿದೆ. ದೇಶದಲ್ಲಿ ಮಾನಸಿಕ ಆರೋಗ್ಯವನ್ನು ಬೆಂಬಲಿಸಲು ಇದು ಪ್ರಮುಖ ಹೆಜ್ಜೆ. ಜೊತೆಗೆ ಮಾನಸಿಕ ಆರೋಗ್ಯದ ಬಗ್ಗೆ ಇರುವ ನಕಾರಾತ್ಮಕತೆಯನ್ನು ತೊಡೆದು ಹಾಕಲು ಕೂಡ ಸಹಾಯ ಮಾಡುತ್ತೆ.
ಈ ವೇಳೆ ಮಾತನಾಡಿದ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ, ನಟಿ ದೀಪಿಕಾ ಪಡುಕೋಣೆ ಜೊತೆಗಿನ ಪಾಲುದಾರಿಕೆಯು ಭಾರತದಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಢಿಸಲು ಸಹಾಯ ಮಾಡುತ್ತೆ. ಮಾನಸಿಕ ಆರೋಗ್ಯದ ಬಗೆಗಿನ ಚರ್ಚೆಯಿಂದ ನೋವು ಅನ್ನು ಕಡಿಮೆ ಮಾಡಬಹುದು, ಜೊತೆಗೆ ಮಾನಸಿಕ ಆರೋಗ್ಯವನ್ನು ಸಾರ್ವಜನಿಕ ಆರೋಗ್ಯದ ಅವಿಭಾಜ್ಯ ಅಂಗ ಎಂದು ಪರಿಗಣಿಸಬಹುದು ಎಂದು ಜೆ.ಪಿ.ನಡ್ಡಾ ಹೇಳಿದ್ದಾರೆ.
ನಟಿ ದೀಪಿಕಾ ಪಡುಕೋಣೆ ಅವರು ಸ್ಥಾಪಿಸಿರುವ ಲೀವ್, ಲವ್ ಮತ್ತು ಲಾಫ್ ಫೌಂಡೇಷನ್ ಕಳೆದ 10 ವರ್ಷಗಳಿಂದ ದೇಶದಲ್ಲಿ ಜನರ ಮಾನಸಿಕ ಆರೋಗ್ಯ ವೃದ್ದಿಯ ಬಗ್ಗೆ ಕೆಲಸ ಮಾಡುತ್ತಿದೆ. ಹೀಗಾಗಿ ಮಾನಸಿಕ ಆರೋಗ್ಯದ ಅಂಬಾಸಿಡರ್ ಆಗಲು ನಟಿ ದೀಪಿಕಾ ಪಡುಕೋಣೆ ಅವರೇ ಸೂಕ್ತ ವ್ಯಕ್ತಿ ಎಂದು ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ.
Renowned Indian actress Deepika Padukone has been appointed as the first-ever Mental Health Ambassador of the Union Ministry of Health & Family Welfare.
— Ministry of Health (@MoHFW_INDIA) October 10, 2025
She expressed her deep honor in taking up this role and emphasized her commitment to supporting India’s ongoing efforts under… pic.twitter.com/lRa2LzcaMI
"ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೊದಲ ಮಾನಸಿಕ ಆರೋಗ್ಯ ರಾಯಭಾರಿಯಾಗಿ ಸೇವೆ ಸಲ್ಲಿಸಲು ನನಗೆ ತುಂಬಾ ಗೌರವವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ಭಾರತವು ಮಾನಸಿಕ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡುವಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಈ ಆವೇಗವನ್ನು ಹೆಚ್ಚಿಸಲು ಮತ್ತು ನಮ್ಮ ರಾಷ್ಟ್ರದ ಮಾನಸಿಕ ಆರೋಗ್ಯ ಚೌಕಟ್ಟನ್ನು ಮತ್ತಷ್ಟು ಬಲಪಡಿಸಲು ಸಚಿವಾಲಯದೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ" ಎಂದು ದೀಪಿಕಾ ಪಡುಕೋಣೆ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.