/newsfirstlive-kannada/media/media_files/2025/10/04/cough-syrup-2025-10-04-07-53-01.jpg)
ಕೆಮ್ಮು ಔಷಧಿ ಜೀವಗಳನ್ನು ಕೊಲ್ಲುತ್ತಿದೆ. ಒಂದಲ್ಲ ಎರಡಲ್ಲ.. 12 ಮಕ್ಕಳ ಸಾವು ದೇಶದಲ್ಲಿ ಸಂಚಲನ ಮೂಡಿಸಿದೆ. ಮಧ್ಯಪ್ರದೇಶದ ಛಿಂದ್ವಾರಾ, ರಾಜಸ್ಥಾನದ ಭರತ್‌ಪುರ ಮತ್ತು ಸಿಕಾರ್‌ನಲ್ಲಿ ಇಲ್ಲಿಯವರೆಗೆ 12 ಮಕ್ಕಳು ಮೂತ್ರಪಿಂಡ ವೈಫಲ್ಯದಿಂದ ಮೃತಪಟ್ಟಿದ್ದಾರೆ. ಅದಕ್ಕೆ ಕಾರಣ ಕೆಮ್ಮಿಗೆ ನೀಡುವ ಸಿರಪ್ () ಎನ್ನಲಾಗಿದೆ.
ಈ ಮಕ್ಕಳ ದುರಂತ ಅಂತ್ಯ ದೇಶಾದ್ಯಂತ ಸುದ್ದಿ ಮಾಡಿದೆ. ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಆರೋಗ್ಯ ಇಲಾಖೆ ಮಕ್ಕಳಿಗೆ ಕೆಮ್ಮು ಔಷಧಿಯ ಕುರಿತು ಸಲಹೆ ನೀಡಿದೆ. ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಪ್ರಮುಖ ಆದೇಶವನ್ನು ಪಾಲಿಸುವಂತೆ ಸೂಚಿಸಿದೆ. ಮಕ್ಕಳಿಗೆ ಕೆಮ್ಮು ಔಷಧಿಯನ್ನು ಬಹಳ ಎಚ್ಚರಿಕೆಯಿಂದ ಮತ್ತು ಸೀಮಿತ ಪ್ರಮಾಣದಲ್ಲಿ ನೀಡಬೇಕು ಎಂದಿದೆ.
ಇದನ್ನೂ ಓದಿ: ಹಾಲು, ಲವಂಗ ಸೇರಿಸಿ ಕುಡಿಯಬೇಕೇ, ಕುಡಿಯಬಾರದೇ.. ನಿಮಗಾಗಿ ಮಾಹಿತಿ ಇಲ್ಲಿದೆ..!
ಕೆಮ್ಮು ಮತ್ತು ಶೀತದಿಂದ ಬಳಲುತ್ತಿರುವ ಹೆಚ್ಚಿನ ಮಕ್ಕಳು ತಾವಾಗಿಯೇ ಗುಣಮುಖರಾಗುತ್ತಾರೆ. ಅವರಿಗೆ ಔಷಧಿಗಳ ಅಗತ್ಯವಿಲ್ಲ. 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಮತ್ತು ಶೀತ ಔಷಧಿಯನ್ನು ನೀಡಬಾರದು. ಈ ಔಷಧಿಗಳನ್ನು ಸಾಮಾನ್ಯವಾಗಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ನೀಡದಿಲ್ಲ. ವೈದ್ಯರು ಪರೀಕ್ಷೆಯ ನಂತರ ಅಗತ್ಯವೆಂದು ಭಾವಿಸಿದರೆ ಮಾತ್ರ 5 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಔಷಧಿಗಳನ್ನು ನೀಡಬೇಕು. ಇದನ್ನು ಕಡಿಮೆ ಪ್ರಮಾಣದಲ್ಲಿ, ಅಲ್ಪಾವಧಿಗೆ ನೀಡಬೇಕು. ಮಕ್ಕಳ ಆರೈಕೆಯಲ್ಲಿ ಮನೆ, ಔಷಧೀಯವಲ್ಲದ ಕ್ರಮಗಳನ್ನ ತೆಗೆದುಕೊಳ್ಳಬಾರದು. ವಿಶ್ರಾಂತಿ ಮತ್ತು ಸಹಾಯಕ ಆರೈಕೆಗೆ ಆದ್ಯತೆ ನೀಡಬೇಕು ಕೇಂದ್ರ ಆರೋಗ್ಯ ಸಚಿವಾಲಯ ಶಿಫಾರಸು ಮಾಡಿದೆ.
ಮಕ್ಕಳಿಗೆ ಸುರಕ್ಷಿತ ಔಷಧಿಗಳನ್ನು ಮಾತ್ರ ನೀಡಿ
GMP ಅಡಿಯಲ್ಲಿ ತಯಾರಿಸಿದ ಸುರಕ್ಷಿತ ಔಷಧಿಗಳನ್ನು ಮಾತ್ರ ಸಂಗ್ರಹಿಸಿ ನೀಡಬೇಕು ಎಂದು ಕೇಂದ್ರ ಹೇಳಿದೆ. ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಜಿಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಸೂಚನೆ ನೀಡಬೇಕು. ಈ ಬಗ್ಗೆ ಹೆಚ್ಚು ಪ್ರಚಾರ ಮಾಡುವಂತೆ ತಿಳಿಸಿದೆ.
ಇತ್ತೀಚೆಗೆ ಬಹಿರಂಗ..
ಕಳೆದ ಎರಡು ವಾರಗಳಲ್ಲಿ ರಾಜಸ್ಥಾನದಲ್ಲಿ ನಡೆದ ಘಟನೆಗಳು ತಡವಾಗಿ ಬೆಳಕಿಗೆ ಬಂದಿವೆ. ಸೆಪ್ಟೆಂಬರ್ 28 ರಂದು, ಸಿಕಾರ್ ಜಿಲ್ಲೆಯ 5 ವರ್ಷದ ನಿತೀಶ್ ಕೆಮ್ಮಿನಿಂದ ಬಳಲುತ್ತಿದ್ದ ಮತ್ತು ಅವನ ಪೋಷಕರು ಚಿರಾನಾದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿನ ವೈದ್ಯರು ಅವನಿಗೆ ಸಿರಪ್ ನೀಡಿದರು. ರಾತ್ರಿ ಕುಡಿದ ನಂತರ, ನಿತೀಶ್ ಬೆಳಗ್ಗೆ ಎಚ್ಚರಗೊಳ್ಳಲಿಲ್ಲ. ಬಳಿಕ ಪೋಷಕರು ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ವೈದ್ಯರು ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.
ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ಕೇವಲ ಹದಿನೈದು ದಿನಗಳಲ್ಲಿ ಕೆಮ್ಮಿನ ಸಿರಪ್‌ಗಳಿಂದ ಮೂತ್ರಪಿಂಡ ವೈಫಲ್ಯ ಸಂಭವಿಸಿ ಒಂಬತ್ತು ಮಕ್ಕಳು ಮೃತಪಟ್ಟಿದ್ದಾರೆ. ಇದು ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಿಂದೆ ಗ್ಯಾಂಬಿಯಾ ಮತ್ತು ಉಜ್ಬೇಕಿಸ್ತಾನ್‌ನಲ್ಲಿ ಭಾರತೀಯ ಔಷಧ ಕಂಪನಿಗಳು ತಯಾರಿಸಿದ ಕೆಮ್ಮಿನ ಸಿರಪ್‌ಗಳಿಂದ ಮಕ್ಕಳು ಮೃತಪಟ್ಟಿರೋದು ಬೆಳಕಿಗೆ ಬಂದಿತ್ತು.
ಇದನ್ನೂ ಓದಿ: ಮೈನರ್ ಹಾರ್ಟ್​ ಅಟ್ಯಾಕ್​ನ ಲಕ್ಷಣಗಳು.. ಇದನ್ನು ಹಗುರವಾಗಿ ಪರಿಗಣಿಸಬೇಡಿ..!
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ