/newsfirstlive-kannada/media/media_files/2025/10/15/green-firecrackers-2025-10-15-11-05-17.jpg)
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂಕೋರ್ಟ್ ಅವಕಾಶ ನೀಡಿದೆ. ಅಕ್ಟೋಬರ್ 18 ರಿಂದ 21 ರವರೆಗೆ ಹಸಿರು ಪಟಾಕಿಗೆ ಸುಪ್ರೀಂಕೋರ್ಟ್ ಅವಕಾಶ ನೀಡಿದೆ. ಪಟಾಕಿ ಸಿಡಿಸುವ ಬಗ್ಗೆ ಸಮತೋಲನದ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವಲಯದ ನಗರಗಳಲ್ಲಿ ಪಟಾಕಿ ಸಿಡಿತದಿಂದ ವಾಯು ಮಾಲಿನ್ಯ ಮಿತಿ ಮೀರಿ ಹೋಗುತ್ತೆ. ಮೂರು ನಾಲ್ಕು ದಿನಗಳವರೆಗೂ ಜನರು ಮನೆಯಿಂದ ಹೊರ ಬರಲು ಸಾಧ್ಯವಾಗದಂಥ ಸ್ಥಿತಿ ನಿರ್ಮಾಣವಾಗುತ್ತೆ. ಮನೆಯಿಂದ ಹೊರ ಬಂದರೇ, ಕಣ್ಣು ಉರಿ, ಕಣ್ಣೀರು ಬರುತ್ತೆ, ಅಷ್ಟರ ಮಟ್ಟಿಗೆ ದೆಹಲಿಯಲ್ಲಿ ಪಟಾಕಿಗಳಿಂದ ವಾಯು ಮಾಲಿನ್ಯವಾಗುತ್ತೆ. ಹೀಗಾಗಿ ಕೆಲವೊಮ್ಮೆ ಪಟಾಕಿ ಸಿಡಿಸಲು ನಿರ್ಬಂಧ ವಿಧಿಸಲಾಗುತ್ತೆ.
ಆದರೇ, ಸುಪ್ರೀಂಕೋರ್ಟ್ ಈಗ ಹಸಿಕು ಪಟಾಕಿಗೆ ಮಾತ್ರ ದೆಹಲಿಯಲ್ಲಿ ಅವಕಾಶ ಕೊಟ್ಟಿದೆ. ಹಸಿರು ಪಟಾಕಿಗಳಿಂದ ಹೆಚ್ಚಿನ ವಾಯು ಮಾಲಿನ್ಯವಾಗಲ್ಲ. ಹಿಂದೂಗಳು ಪಟಾಕಿ ಸಿಡಿಸುವ ಮೂಲಕ ಸಂಪ್ರದಾಯ, ಸಂಸ್ಕೃತಿಯನ್ನು ಪಾಲಿಸಿದಂತಾಗುತ್ತೆ. ಜೊತೆಗೆ ಪರಿಸರಕ್ಕೂ ಹಾನಿ ಇಲ್ಲ. ಹೀಗಾಗಿ ಸುಪ್ರೀಂಕೋರ್ಟ್ ನ ಸಂಸ್ಕೃತಿ, ಸಂಪ್ರದಾಯವನ್ನು ಗಮನದಲ್ಲಿಟ್ಟುಕೊಂಡು ಪರಿಸರಕ್ಕೂ ಹಾನಿಯಾಗದಂಥ ಪಟಾಕಿಗಳಾದ ಹಸಿರು ಪಟಾಕಿಗಳನ್ನು ಸಿಡಿಸಲು ಅವಕಾಶ ಕೊಟ್ಟಿದೆ.