Advertisment

ತೀವ್ರ ಹೃದಯಾಘಾತ.. 35 ವರ್ಷದ ವಿರಕ್ತ ಮಠದ ಸ್ವಾಮೀಜಿ ನಿಧನ

author-image
AS Harshith
Updated On
ತೀವ್ರ ಹೃದಯಾಘಾತ.. 35 ವರ್ಷದ ವಿರಕ್ತ ಮಠದ ಸ್ವಾಮೀಜಿ ನಿಧನ
Advertisment
  • ನಸುಕಿನ ಜಾವ ಸ್ವಾಮೀಜಿಗೆ ತೀವ್ರ ಹೃದಯಾಘಾತ
  • ಇಂದು ಧಾರ್ಮಿಕ ವಿಧಿ ವಿಧಾನ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ
  • ನಿನ್ನೆ ವಚನ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸ್ವಾಮೀಜಿ ಇಂದಿಲ್ಲ

ಕಲಬುರಗಿ: ತೀವ್ರ ಹೃದಯಾಘಾತದಿಂದ ಕಲಬುರಗಿಯ ಕಾಳಗಿ ತಾಲೂಕಿನ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ (35) ವಿಧಿವಶರಾಗಿದ್ದಾರೆ. ನಸುಕಿನ ಜಾವ ತೀವ್ರ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.

Advertisment

ಇದನ್ನೂ ಓದಿ: VIDEO: ನದಿ ನೀರಿನಲ್ಲಿ ಹುಚ್ಚಾಟ ಮೆರೆದ ಡ್ರೈವರ್​.. ಕಣ್ಣ ಮುಂದೆಯೇ ಕೊಚ್ಚಿ ಹೋಯ್ತು ಲಾರಿ

ಶ್ರೀ ಸಿದ್ದರಾಮ ಮಹಾಸ್ವಾಮಿ ನಿನ್ನೆ ರಟಕಲ್ ಗ್ರಾಮದಲ್ಲಿ ವಚನ ಸಂಗಮ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ರಟಕಲ್ ಗ್ರಾಮದಲ್ಲಿ ಆಯೋಜನೆ ಮಾಡಲಾಗಿದ್ದ ಅದ್ಧೂರಿ ವಚನ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಶಾಸಕ ಬಿಆರ್ ಪಾಟೀಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಅವಘಡ.. ಬಸ್​ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವು

ಆದರಿಂದು ನಸುಕಿನ ಜಾವ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ ವಿಧಾನ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment