ಕನ್ನಡಿಗರಿಗೆ ಖಡಕ್​ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ; ಚೂರು ಯಾಮಾರಿದ್ರೂ ಆರೋಗ್ಯ ಕೆಡೋದು ಗ್ಯಾರಂಟಿ!

author-image
Bheemappa
Updated On
ಅಬ್ಬಬ್ಬಾ.. 3 ವಾರದಲ್ಲಿ ಬೆಂಗಳೂರಿನ 7,324 ಮಂದಿಗೆ ಅತಿಸಾರ ಸಮಸ್ಯೆ; ಮುನ್ನೆಚ್ಚರಿಕಗಳೇನು?
Advertisment
  • ಆದರೆ ಈ ಸಲ ವಾಡಿಕೆಗಿಂತ ಮುನ್ನವೇ ಬೇಸಿಗೆ ಶುರುವಾಗಿದೆ
  • ಈ ಬಾರಿ ಫೆಬ್ರವರಿಯಿಂದಲೇ ಆರಂಭವಾದ ಭಾರೀ ಬಿಸಿಲು
  • ರಾಜ್ಯದ ಈ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ ಹೆಚ್ಚಿದೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿದ್ದು ಮುಂದಿನ 14 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ ಬೇಸಿಗೆಗಾಲ ಮಾರ್ಚ್‌ನಿಂದ ಮೇ ತಿಂಗಳವರೆಗೆ ಇರುತ್ತದೆ. ಆದರೆ ಈ ಬಾರಿ ವಾಡಿಕೆಗಿಂತ ಮುನ್ನವೇ ಬೇಸಿಗೆ ಶುರುವಾಗಿರುವುದು ಆತಂಕ ಮೂಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​ 2 ರಿಂದ 16ರವರೆಗೆ ಬಿಸಿಗಾಳಿ ಬೀಸುವ ಸಾಧ್ಯತೆಗಳಿದ್ದು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹೆಚ್ಚಾಗಿ ಇರಲಿದೆ. ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇನ್ನು, ಏಪ್ರಿಲ್‌ನಲ್ಲಿ ಹೆಚ್ಚಾಗುತ್ತಿದ್ದ ಉಷ್ಣಾಂಶ ಮಾರ್ಚ್‌ನಲ್ಲೇ ಅಧಿಕವಾಗಿದೆ. ಸಾಮಾನ್ಯವಾಗಿ ಮಾರ್ಚ್ ಬಳಿಕ ಬಿಸಿಲಿನ ಬೇಗೆ ಹೆಚ್ಚಾಗುತ್ತಿತ್ತು. ಆದರೆ ಈ ಬಾರಿ ಫೆಬ್ರವರಿಯಿಂದ ಸುಡು ಬಿಸಿಲು ನೆತ್ತಿ ಸುಡುತ್ತಿದೆ. ಹೀಗಾಗಿ ಆದಷ್ಟು ಜನರು ಬಿಸಿಲಿನಿಲ್ಲಿ ಓಡಾಡುವಾಗ ಕೊಡೆ ಬಳಕೆ ಮಾಡಿದರೆ ಉತ್ತಮ. ಜೊತೆಗೆ ಮಕ್ಕಳನ್ನು ಹೆಚ್ಚಾಗಿ ಬಿಸಿಲಿನಲ್ಲಿ ಆಡದಂತೆ ತಡೆಯಬೇಕು. ನೀರಿನಂಶ ಇರುವ ಪದಾರ್ಥಗಳನ್ನ ಹಾಗಾಗ ಸೇವೆನೆ ಮಾಡಿದರೆ ಬಿಸಿಲಿನ ಜಳಕ್ಕೆ ಒಳ್ಳೆಯದು ಎನ್ನುವುದು ತಜ್ಞರ ಅಭಿಪ್ರಾಯವಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment