/newsfirstlive-kannada/media/post_attachments/wp-content/uploads/2024/07/BNG_RAIN-5.jpg)
ರಾಜ್ಯದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಭಾರಿ ಮಳೆಯಾಗುತ್ತಿದ್ದು, ಶುಕ್ರವಾರ ಕೂಡ ವ್ಯಾಪಕ ಮಳೆಯಾಗುವ ಸೂಚನೆ ನೀಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ಸಿಲಿಂಡರ್ ಲಾರಿ- ಬೈಕ್ ಮಧ್ಯೆ ಭೀಕರ ಡಿಕ್ಕಿ.. ರಕ್ತದ ಮಡುವಿನಲ್ಲೇ ಉಸಿರು ಚೆಲ್ಲಿದ ಗಂಡ-ಹೆಂಡತಿ
ಇದರ ಮಧ್ಯೆ ಇಂದು ಮತ್ತು ನಾಳೆ ಆರು ಜಿಲ್ಲೆಗಳಿಗೆ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಇಂದು ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉತ್ತರ ಕನ್ನಡದಲ್ಲಿ 23 ಸೆ.ಮೀ, ಶಿವಮೊಗ್ಗ 22 ಸೆ.ಮೀ ವ್ಯಾಪಕ ಮಳೆಯಾಗಲಿದೆ ಎಂದು ಎಚ್ಚರಿಕೆ ಕೊಟ್ಟಿದೆ.
ಇಂದಿನಿಂದ ಜುಲೈ 21ರವರೆಗೆ ರಾಜ್ಯದಲ್ಲಿ ಭಾರೀ ಮಳೆ ಆಗಲಿದೆ ಅಂತ ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ