ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಭರ್ಜರಿ ಮಳೆ
ಇಂದು ಸಿಲಿಕಾನ್ ಸಿಟಿಯಲ್ಲಿ ಜೋರು ಮಳೆ ಸಾಧ್ಯತೆ
ರಾಜ್ಯ ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು?
ಬೆಂಗಳೂರು: ರಾಜ್ಯದಲ್ಲಿ ಮಳೆರಾಯನ ಅಬ್ಬರ ಇನ್ನೂ ಮುಂದುವರೆಯಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಂತೂ ಇಂದು ಸಂಜೆ, ರಾತ್ರಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಹಲವೆಡೆ ಮೋಡ ಕವಿದ ವಾತಾವರಣ ಇದೆ. ಹೀಗಾಗಿ ಸಂಜೆ ವೇಳೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಷ್ಟೇ ಅಲ್ಲ ಇನ್ನೂ 2 ದಿನ ಭರ್ಜರಿ ಮಳೆಯಾಗಲಿದೆ ಎಂದು ತಿಳಿಸಿದೆ.
ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದೆ. ಕರಾವಳಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಸೇರಿ ಹಲವೆಡೆ ಮಳೆಯಾಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ