newsfirstkannada.com

Karnataka Rains​​: ಯುಗಾದಿ ಬಳಿಕ ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ!

Share :

Published April 5, 2024 at 5:13pm

Update April 10, 2024 at 6:30pm

    ಕಳೆದೊಂದು ತಿಂಗಳಿನಿಂದ ಬಿಸಿಲಿನ ತಾಪಮಾನಕ್ಕೆ ಕಂಗೆಟ್ಟ ಬೆಂಗಳೂರು

    ಕೊನೆಗೂ ಬೆಂಗಳೂರಿಗರಿಗೆ ಗುಡ್​ನ್ಯೂಸ್​ ಕೊಟ್ಟ ಹವಾಮಾನ ಇಲಾಖೆ

    ಯುಗಾದಿ ಬಳಿಕ ಎರಡು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆಯಂತೆ!

ಬೆಂಗಳೂರು: ಕಳೆದೊಂದು ತಿಂಗಳಿನಿಂದ ಬಿಸಿಲಿನ ತಾಪಮಾನಕ್ಕೆ ಕಂಗೆಟ್ಟಿದ್ದ ಬೆಂಗಳೂರಿಗೆ ಗುಡ್​ನ್ಯೂಸ್​ ಒಂದಿದೆ. ಸದ್ಯದಲ್ಲೇ ಬೆಂಗಳೂರಲ್ಲಿ ಭಾರೀ ಮಳೆ ಆಗೋ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಹೌದು, ಯುಗಾದಿ ಬಳಿಕ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಏಪ್ರಿಲ್ 13 ಮತ್ತು 14ರ ಬಳಿಕ ಬೆಂಗಳೂರಿನಲ್ಲಿ ಮಳೆಯಾಗಲಿದೆ. ಬೆಂಗಳೂರು ಅಷ್ಟೇ ಅಲ್ಲ ಇಡೀ ರಾಜ್ಯದಲ್ಲಿ ಮಳೆಯ ಸಿಂಚನವಾಗಲಿದೆ ಎಂದು ತಿಳಿದು ಬಂದಿದೆ.

ಇನ್ನು, ಈಗಾಗಲೇ ರಾಜ್ಯದ ಹಲವೆಡೆ ಮಳೆ ಬಿದ್ದಿದೆ. ಇಷ್ಟಾದ್ರೂ ಇನ್ನೂ ಒಂದೇ ಒಂದು ಹನಿ ಕೂಡ ಬೆಂಗಳೂರಲ್ಲಿ ಬೀಳಲಿಲ್ಲ. ಹೀಗಾಗಿ ಬೆಂಗಳೂರಿಗರು ಬೇಸಿಗೆಯ ಬಿರು ಬಿಸಿಲಿಗೆ ಹೈರಾಣಾಗಿ ಹೋಗಿದ್ದಾರೆ.

ಕೊಡಗು, ಚಿಕ್ಕಮಗಳೂರು, ಮೈಸೂರು, ಧಾರವಾಡ, ದಾವಣಗೆರೆ, ಶಿವಮೊಗ್ಗ, ಬೆಳಗಾವಿ, ಬೀದರ್ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಏಪ್ರಿಲ್ ತಿಂಗಳಿನಲ್ಲಿ ಈ ಭಾಗದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ.

ಇದನ್ನೂ ಓದಿ: ‘ರೋಹಿತ್​​ ಮುಂಬೈ ತಂಡವನ್ನು ಮುನ್ನಡೆಸಲಿದ್ದಾರೆ’- ಮೆಗಾ ಟ್ವಿಸ್ಟ್​​ ಕೊಟ್ಟ ಮಾಜಿ ಕ್ರಿಕೆಟರ್​​​​

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Karnataka Rains​​: ಯುಗಾದಿ ಬಳಿಕ ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ!

https://newsfirstlive.com/wp-content/uploads/2023/07/Heavy-Rain_Karnataka.jpg

Load More