/newsfirstlive-kannada/media/post_attachments/wp-content/uploads/2024/10/BNG_RAIN_2-1.jpg)
ಬೆಂಗಳೂರು: ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭರ್ಜರಿ ಮಳೆ ಆಗಲಿದೆ.
ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರ್ನಾಟಕದಲ್ಲಿ ರಾತ್ರಿ ವೇಳೆ ಚಳಿಯ ತೀವ್ರತೆ ಹೆಚ್ಚಾಗಲಿದೆ. ಹೀಗಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜೋರು ಮಳೆ ಆಗಲಿದ್ದು, ಕರಾವಳಿ ಭಾಗದಲ್ಲಿ ಚಳಿಯ ತೀವ್ರತೆ ಇನ್ನಷ್ಟು ಅಧಿಕ ಆಗಬಹುದು. ನವೆಂಬರ್ 11ನೇ ತಾರೀಕುವರೆಗೂ ಬಿರುಗಾಳಿ ಸಮೇತ ಮಳೆ ಬೀಳಲಿದೆ.
ಉತ್ತರಾಂಧ್ರ ಮತ್ತು ಗೋದಾವರಿ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ. ಚಳಿಗಾಲದಲ್ಲಿ ಮಳೆಯಾಗೋ ಕಾರಣ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರ ಸೂಚನೆ ನೀಡಿದೆ.
ಕರ್ನಾಟಕದಲ್ಲೂ ಭರ್ಜರಿ ಮಳೆ
ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಭರ್ಜರಿ ಮಳೆ ಆಗಲಿದೆ. ದಕ್ಷಿಣ ಕನ್ನಡ, ಉಡುಪಿ, ಹಾಸನದ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾನ ಇಲಾಖೆ ತಿಳಿಸಿದೆ. ಕರಾವಳಿ ಭಾಗದಲ್ಲಿ ಪ್ರವಾಹದ ಭೀತಿ ಎದುರಾಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ