/newsfirstlive-kannada/media/post_attachments/wp-content/uploads/2023/07/Heavy-Rain_Karnataka.jpg)
ಬೆಂಗಳೂರು: ಇಂದು ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಸಾಧಾರಣ ಮಳೆಯಾಗಲಿದೆ. ರಾಜ್ಯದಲ್ಲಿ ಈ ವರ್ಷದ ಮೊದಲ ಮಳೆ ಚುರುಕುಗೊಂಡಿದೆ. ಹೀಗಾಗಿ ಇಂದು, ನಾಳೆ ಕೆಲ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗೋ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು, ನಗರದ ಕಾರ್ಪೊರೇಷನ್ ಸರ್ಕಲ್, ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ವಿಜಯನಗರ, ರಾಜಾಜಿನಗರದಲ್ಲಿ ಭಾರೀ ಮಳೆ ಆಗಲಿದೆ. ಇದರಿಂದ ವಾಹನ ಸವಾರರು ಪರದಾಡಲಿದ್ದಾರೆ.
ಕೇವಲ ಇಷ್ಟೇ ಅಲ್ಲ ಬೆಂಗಳೂರು ಸೇರಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬ ಮಾಹಿತಿ ಹವಾಮಾನ ಇಲಾಖೆ ನೀಡಿದೆ. ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಧಾರವಾಡ, ಉಡುಪಿ, ಹಾವೇರಿ, ಬೆಳಗಾವಿ, ಚಿತ್ರದುರ್ಗ, ಚಾಮರಾಜನಗರ, ತುಮಕೂರಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ: ಮಲೆನಾಡಿನ ಜನರಿಗೆ ಮತ್ತೆ ಗುಡ್ನ್ಯೂಸ್; ಶಿವಮೊಗ್ಗದಲ್ಲಿ ಧಾರಾಕಾರ ಮಳೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ