ರಾಜ್ಯದಲ್ಲಿ ಕಳೆದ ಮೂರು ವಾರಗಳಿಂದ ಅತ್ಯಧಿಕ ಮಳೆ
ದಾಖಲೆ ಮಳೆಗೆ ತತ್ತರಿಸಿ ಹೋದ ಜನತೆಗೆ ಮತ್ತೆ ಶಾಕ್..!
ಇನ್ನೆಷ್ಟು ದಿನ ರಾಜ್ಯದಲ್ಲಿ ಮಳೆ? ಎಲ್ಲೆಲ್ಲಿ ರೆಡ್ ಅಲರ್ಟ್?
ಬೆಂಗಳೂರು: ಇಡೀ ದೇಶ ಮಾತ್ರವಲ್ಲ ಕರ್ನಾಟಕದಲ್ಲೂ ಕಳೆದ ಮೂರು ವಾರಗಳಿಂದ ಅತ್ಯಧಿಕ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಉತ್ತರ ಒಳನಾಡಿನಲ್ಲಿ 24 ಗಂಟೆ ಮಳೆ ಸುರಿಯಲಿದೆ. ರಾಜ್ಯದ ಕರಾವಳಿ ಭಾಗದಲ್ಲೂ ಇಡೀ ದಿನ ವರುಣ ಕಾಡುತ್ತಲೇ ಇದ್ದಾನೆ. ಹೀಗಾಗಿ ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ 4 ದಿನಗಳ ಕಾಲ ಇಡೀ ರಾಜ್ಯಾದ್ಯಂತ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಡಳಿತಕ್ಕೆ ಸರ್ಕಾರ ಆದೇಶಿಸಿದೆ.
ನಾಲ್ಕೈದು ದಿನ 24 ಗಂಟೆಗಳ ಕಾಲ ಮಳೆ
ಇಷ್ಟು ದಿನ ಮಳೆ ಬಾರದೆ ಕಂಗಾಲಾಗಿದ್ದ ಜನ ಈಗ ದಿನವಿಡೀ ಕಾಡುತ್ತಿರೋ ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿದ್ದಾರೆ. ಇನ್ನೂ ನಾಲ್ಕೈದು ದಿನ 24 ಗಂಟೆಗಳ ಕಾಲ ಮಳೆ ಆಗಲಿದ್ದು, ಬೆಳೆ ಹಾಳಾಗುವ ಆತಂಕದಲ್ಲಿ ರೈತರು ಇದ್ದಾರೆ.
ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಬರಲಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ