ಇಂದಿನಿಂದ 5 ದಿನಗಳ ಕಾಲ ಭಾರೀ ಮಳೆ; ರಾಜ್ಯದ ಯಾವೆಲ್ಲಾ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

author-image
admin
Updated On
ಇಂದಿನಿಂದ 5 ದಿನಗಳ ಕಾಲ ಭಾರೀ ಮಳೆ; ರಾಜ್ಯದ ಯಾವೆಲ್ಲಾ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ
Advertisment
  • ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಭಾಗದಲ್ಲೂ ಮಳೆಯ ಮುನ್ಸೂಚನೆ
  • ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ
  • ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿ ಹಲವು ಜಿಲ್ಲೆಗಳಿಗೆ ಎಚ್ಚರಿಕೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಕಡೆ ಮಳೆಯ ಮುನ್ಸೂಚನೆ ಇದೆ. ಭಾರತೀಯ ಹವಾಮಾನ ಇಲಾಖೆಯು ಇಂದಿನಿಂದ 5 ದಿನಗಳ ಕಾಲ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಕೊಟ್ಟಿದೆ. ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಭಾಗದಲ್ಲೂ ಜೂನ್ 15ರವರೆಗೆ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

publive-image

ದಿನಾಂಕ 12-6-2025 (ಗುರುವಾರ)
ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಬೀದರ್, ಕಲ್ಬುರ್ಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

publive-image

ದಿನಾಂಕ 13-6-2025 (ಶುಕ್ರವಾರ) 
ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಮುಂದುವರಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಇಂದು ಭಾರೀ ಮಳೆ.. ಈ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಕಡ್ಡಾಯ ರಜೆ ಘೋಷಣೆ 

ದಿನಾಂಕ 14-06-2025 (ಶನಿವಾರ) 
ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ರೆಡ್ ಅಲರ್ಟ್, ಬೆಳಗಾವಿ, ಧಾರವಾಡ, ಹಾವೇರಿ, ಹಾಸನ ಮೈಸೂರಿಗೆ ಆರೆಂಜ್ ಮತ್ತು ಬೀದರ್, ಕಲ್ಬುರ್ಗಿ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment