Advertisment

ಇನ್ನೂ ಎಷ್ಟು ದಿನ ಭಯಂಕರ ಮಳೆ ಸುರಿಯಲಿದೆ? ಕರಾವಳಿ ಜನರ ಆತಂಕ ಹೆಚ್ಚಿಸಿದ ಹವಾಮಾನ ವರದಿ

author-image
Ganesh
Updated On
ಇನ್ನೂ ಎಷ್ಟು ದಿನ ಭಯಂಕರ ಮಳೆ ಸುರಿಯಲಿದೆ? ಕರಾವಳಿ ಜನರ ಆತಂಕ ಹೆಚ್ಚಿಸಿದ ಹವಾಮಾನ ವರದಿ
Advertisment
  • ಅರಬ್ಬಿ ಸಮುದ್ರ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ
  • ರೆಡ್​ ಅಲರ್ಟ್​ ಘೋಷಣೆ ಮಾಡಿದ ಹವಾಮಾನ ಇಲಾಖೆ
  • ಶಿರೂರು ಬಳಿ ಗುಡ್ಡ ಕುಸಿದು ಒಂದೇ ಕುಟುಂಬದ 7 ಮಂದಿ ಸಾವು

ಬೆಂಗಳೂರು: ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂಗಾರು ಮತ್ತಷ್ಟು ಚುರುಕು ಪಡೆದುಕೊಂಡಿದೆ. ಇಂದು ಮತ್ತು ನಾಳೆ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Advertisment

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 19 ರಿಂದ ಕರಾವಳಿ ಜಿಲ್ಲೆಗಳು ಸೇರಿ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು, ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆ ನಿರಂತರವಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

ಇದನ್ನೂ ಓದಿ:‘ಸ್ವಲ್ಪದ್ರಲ್ಲೇ ನನ್ನ ಸಾವು ತಪ್ಪಿತು..’ 7 ಮಂದಿ ಬಲಿ ಪಡೆದ ಗುಡ್ಡ ಕುಸಿತದ ಭಯಾನಕ ಕ್ಷಣ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ

publive-image

ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಪರಿಣಾಮ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಅನಾಹುತ ಸಂಭವಿಸಿದೆ. ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು ಒಂದೇ ಕುಟುಂಬದ ಐವರು ಸೇರಿ 7 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

Advertisment

ಇದನ್ನೂ ಓದಿ:ಶಿರೂರು ಗುಡ್ಡ ಕುಸಿತದಲ್ಲಿ ತುಂಬಾ ಸಾವು, ನೋವು.. ಮೃತರ ಸಂಖ್ಯೆ 12ಕ್ಕೆ ಏರಿಕೆ ಸಾಧ್ಯತೆ.. ಆಗಿದ್ದೇನು..

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment