Advertisment

ಇಂದು ಕೂಡ ಧಾರಾಕಾರ ಮಳೆ.. 4 ಜಿಲ್ಲೆಗಳಿಗೆ ಅಲರ್ಟ್; ಮನೆಗಳಿಗೆ ನುಗ್ಗಿದ ನೀರು, ಬೆಳೆ ಎಲ್ಲ ಜಲಾವೃತ

author-image
Bheemappa
Updated On
ಇಂದು ಕೂಡ ಧಾರಾಕಾರ ಮಳೆ.. 4 ಜಿಲ್ಲೆಗಳಿಗೆ ಅಲರ್ಟ್; ಮನೆಗಳಿಗೆ ನುಗ್ಗಿದ ನೀರು, ಬೆಳೆ ಎಲ್ಲ ಜಲಾವೃತ
Advertisment
  • ಮನೆ, ಅಂಗಡಿಗಳಿಗೆ ಮಳೆನೀರು ನುಗ್ಗಿ ಲಕ್ಷಾಂತರ ರೂಪಾಯಿ ನಷ್ಟ
  • ಧಾರಾಕಾರವಾಗಿ ಸುರಿದ ಮಳೆಯಿಂದಾಗಿ 2 ಅಡಿಯಷ್ಟು ಮಳೆನೀರು
  • ರಸ್ತೆಗೆ ಬಂದ ಗುಡ್ಡದಿಂದ ಕೆಸರು ಮಿಶ್ರಿತ ನೀರು, ಚಾಲಕರು ಹೈರಾಣ

ರಾಜ್ಯದ ಹಲವೆಡೆ ಮಳೆ ಆರ್ಭಟದ ಜೊತೆಗೆ ಅವಾಂತರಗಳು ಕೂಡ ಮುಂದುವರಿದಿದೆ. ರಾಜ್ಯದ ಹಲವೆಡೆ ಮಳೆಯ ಮುನ್ಸೂಚನೆ ನೀಡಲಾಗಿದೆ. 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಮಧ್ಯೆ ಅಲ್ಲಲ್ಲಿ ಮಳೆರಾಯ ಅನಾಹುತ ಸೃಷ್ಟಿಸಿದ್ದಾನೆ.

Advertisment

ಮಳೆ.. ಮಳೆ.. ಮಳೆ.. ಈ ಶಬ್ದ ಕೇಳಿದ್ರೆ ರೈತರ ಮುಖದಲ್ಲಿ ಮಂದಹಾಸ.. ನೊಂದವರ ಮುಖದಲ್ಲಿ ಸಂಕಟ. ನದಿ ಪಾತ್ರದ ಜನರಿಗೆ ಕಂಟಕ ಎನ್ನುವಂತಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆಟಾಟೋಪ ಹೆಚ್ಚಾಗಿದೆ.

publive-image

ವರುಣದೇವನ ಅಬ್ಬರಕ್ಕೆ ನಲುಗಿದ ಚಿಕ್ಕಬಳ್ಳಾಪುರ ಮಂದಿ

ಚಿಕ್ಕಬಳ್ಳಾಪುರದ ಪೋಶೆಟ್ಟಿಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದ ಮನೆ ಹಾಗೂ ಅಂಗಡಿಗಳಿಗೆ ಮಳೆ ನೀರು ನುಗ್ಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಇದ್ರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಚಿಕ್ಕಬಳ್ಳಾಪುರ, ಗೌರಿಬಿದನೂರು ಮಾರ್ಗದ ರಸ್ತೆಯ ಹೆದ್ದಾರಿ ತಡೆದು ಪ್ರತಿಭಟಿಸಿ ಆಕ್ರೋಶ ಹೊರಹಾಕಿದರು.

ಚಾರ್ಮಾಡಿ ಘಾಟ್​ನಲ್ಲಿ ಮಳೆ, ವಾಹನ ಸಂಚಾರ ಅಸ್ತವ್ಯಸ್ತ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಸುರಿದ ನಿರಂತರ ಮಳೆಗೆ ರಸ್ತೆ ಮೇಲೆ ಎರಡು ಅಡಿ ಎತ್ತರಕ್ಕೆ ಮಳೆ ನೀರು ಹರಿಯುತ್ತಿದೆ. ಮಳೆಗೆ ಗುಡ್ಡದಿಂದ ಕೆಸರು ಮಿಶ್ರಿತ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಚಾಲಕರಿಗೆ ರಸ್ತೆ ಕಾಣದಂತಾಗಿದೆ.

Advertisment

ತಡರಾತ್ರಿ ಸುರಿದ ಬಾರಿ ಮಳಗೆ ಜಿಲ್ಲಾದ್ಯಂತ ಅವಾಂತರ ಸೃಷ್ಟಿ

ಮಳೆಯ ಅಬ್ಬರಕ್ಕೆ ಕೊಪ್ಪಳ ಜಿಲ್ಲೆಯ ಗಂಗಾವತಿ, ಕಾರಟಗಿ, ಕುಷ್ಟಗಿ ಭಾಗದಲ್ಲಿ ಅನಾಹುತಗಳೇ ನಡೆದೋಗಿದೆ. ಕುಷ್ಟಗಿ ತಾಲೂಕಿನ ಎಸ್.ಅಡವಿಭಾವಿ ಗ್ರಾಮದ ಶ್ರೀ ಅಮರೇಶ್ವರ ದೇವಸ್ಥಾನಕ್ಕೆ ನೀರು ನುಗ್ಗಿದ್ದರಿಂದ ದೇವಸ್ಥಾನವನ್ನು ನೀರು ಆವರಿಸಿದೆ. ತಾವರಗೇರಾ-ಮುದೇನೂರ ಗ್ರಾಮಗಳ ಮಾರ್ಗ ಬಂದ್ ಆಗಿದೆ. ಇತ್ತ ಕಾರಟಗಿ ತಾಲೂಕಿನ ಗುಂಡೂರು-ತೊಂಡಿಹಾಳ ಸಂಪರ್ಕ ಸೇತುವೆ ಮೇಲೆ ನೀರು ಆವರಿಸಿದೆ. ರೈತರು ತಮ್ಮ ಜಮೀನುಗಳಿಗೆ ಹೋಗಲು ಪರದಾಡಿದ್ದಾರೆ.

ಅಪಾರ ಪ್ರಮಾಣದ ಹತ್ತಿ, ಮೆಣಸಿನಕಾಯಿ ಬೆಳೆ ಹಾನಿ

ರಾತ್ರಿ ಸುರಿದ ಭಾರೀ ಮಳೆಗೆ ವಿಜಯನಗರ ಜಿಲ್ಲೆಯಲ್ಲಿ ಸಾಕಷ್ಟು ಅವಾಂತರ ಸೃಷ್ಠಿಯಾಗಿವೆ. ಕೆಲವೆಡೇ ಮಳೆ ನೀರು ರಸ್ತೆ ತುಂಬಿ ಮನೆಗಳಿಗೆ ನುಗ್ಗಿದ್ರೆ. ಮತ್ತೊಂದೆಡೆ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹತ್ತಿ, ಮೆಣಸಿನಕಾಯಿ ಬೆಳೆ ಹಾನಿಯಾಗಿದೆ. ಹೊಸಪೇಟೆಯಿಂದ ಕಂಪ್ಲಿಗೆ ಹೋಗುವ ಸೇತುವೆ ಮುಳುಗಡೆಯಾಗಿ ವಾಹನ ಸವಾರರು ಪರದಾಡುವಂತೆ ಮಾಡಿದೆ.

ರಾಜ್ಯದೆಲ್ಲೆಡೆ ಮಳೆ, 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಇಂದು ರಾಜ್ಯದೆಲ್ಲೆಡೆ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ.

Advertisment

ಇದನ್ನೂ ಓದಿ: ವಿನೇಶ್ ಫೋಗಟ್​ಗೆ ಗೋಲ್ಡ್​ ಮೆಡಲ್​.. ಸಾವಿರ ಪದಕಗಳಿಗೆ ಇದೊಂದೇ ಸಮವೆಂದ ಕುಸ್ತಿಪಟು, ಭಾವುಕ 

publive-image

ಇನ್ನೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಭಾರೀ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಚಿಕ್ಕಮಗಳೂರಿನಲ್ಲಿಯೂ ಮಳೆಯಾಗುವ ನಿರೀಕ್ಷೆಯಿದೆ, ಕೋಲಾರ, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಇದೇ ವೇಳೆ ಮುಂದಿನ ಎರಡು ದಿನ ಮೈಸೂರು, ಮಂಡ್ಯ, ಕೊಡಗು, ಹಾಸನ, ಚಾಮರಾಜನಗರ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರದಲ್ಲಿ ಸಾಮಾನ್ಯ ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ:KL ರಾಹುಲ್​ಗೆ ಮೋಸವಾಗುತ್ತಾ..? ಪಾಂಡ್ಯ ಖರೀದಿಗೆ ಕೋಟಿ ಕೋಟಿ ಹಣ ಸುರಿಯಲು​ ಮುಂದಾದ RCB

Advertisment

ರಾಜ್ಯದಲ್ಲಿ ಮಳೆಯಿಂದಾದ ಅವಾಂತರಗಳು ಜನರಿಗೆ ಸಂಕಷ್ಟ ತಂದೊಡ್ಡಿದೆ. ಬೆಳೆಗಳು ಜಲಾವೃತವಾಗಿದ್ರೆ, ಮನೆಗಳಿಗೆ ನೀರು ನುಗ್ಗಿದೆ. ಜನ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿದ್ದಾರೆ.. ಸರ್ಕಾರ ಜನರಿಗಾಗಿ ನಿಲ್ಲುತ್ತಾ ಅನ್ನೋದು ಕಾದು ನೋಡಬೇಕಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment