/newsfirstlive-kannada/media/post_attachments/wp-content/uploads/2025/05/bng-rain.jpg)
ಬೆಂಗಳೂರು: ಬಿರು ಬಿಸಿಲು, ಬಿಸಿ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿ ಜನರಿಗೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ಕೊಟ್ಟಿದೆ. ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ.
ಇದನ್ನೂ ಓದಿ: ಪುಟ್ಟಕ್ಕನ ಮಕ್ಕಳು ವೀಕ್ಷಕರಿಗೆ ಶಾಕಿಂಗ್ ಸುದ್ದಿ; ಮುಕ್ತಾಯದ ಹಂತದಲ್ಲಿದೆ ಟಾಪ್ ಸೀರಿಯಲ್
ಹೌದು, ರಾಜ್ಯದಲ್ಲಿ ಮುಂಗಾರು ಪೂರ್ವ ಚುರುಕಾಗುತ್ತಿದೆ. ಇಂದಿನಿಂದ ಮೂರು ದಿನಗಳ ಕಾಲ ರಾಜ್ಯಕ್ಕೆ ಭಾರೀ ಮಳೆಯಾಗಲಿದೆ ಎಂದು ಅಲರ್ಟ್ ಕೂಡ ನೀಡಲಾಗಿದೆ. ಹೀಗಾಗಿ ಮೇ 17 ಹಾಗೂ 18ರಂದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ಭಾನುವಾರ ಮತ್ತು ಸೋಮವಾರ ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ