Advertisment

ಕರ್ನಾಟಕದ 2 ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ.. ಭಾರೀ ಮಳೆ.. ರೆಡ್​ ಅಲರ್ಟ್​ ಘೋಷಣೆ

author-image
Ganesh
Updated On
ಭಾರೀ ಮಳೆ.. ರಾಜ್ಯದ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Advertisment
  • ರೈಲ್ವೇ ಬ್ರಿಡ್ಜ್ ಅಂಡರ್ ಪಾಸ್​ನಲ್ಲಿ ನುಗ್ಗಿದ ಮಳೆ ನೀರು
  • ಅಪಾಯಕಾರಿ ಮನೆಗಳ ಸರ್ವೆಗೆ ಕೃಷ್ಣ ಬೈರೇಗೌಡ ಸೂಚನೆ
  • ಚಾರ್ಮಾಡಿ ಘಾಟಿಯಲ್ಲಿ ವಾಹನ ಸವಾರರು ಪರದಾಟ

ಮುಂಗಾರು ಮಳೆ ಆರಂಭವಾದ್ರೂ ಕೆಲದಿನಗಳಿಂದ ಮಾಯವಾಗಿದ್ದ ವರುಣ ತನ್ನ ಆರ್ಭಟ ಶುರು ಮಾಡಿದ್ದಾನೆ. ಕರಾವಳಿ, ಮಲೆನಾಡು ಭಾಗದಲ್ಲಿ ಎರ್ರಾಬಿರ್ರಿಯಾಗಿ ಅಬ್ಬರಿಸುತ್ತಿದ್ದಾನೆ. ವರುಣನ ಅಬ್ಬರಕ್ಕೆ ರಾಜ್ಯದ ಹಲವೆಡೆ ಅವಾಂತರಗಳೇ ಸೃಷ್ಟಿಯಾಗಿವೆ.

Advertisment

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್, ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಾನಿಗಳು ಸಂಭವಿಸಿವೆ. ಈ ಹಿನ್ನೆಲೆ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಾತ್ರವಲ್ಲದೆ ಮುಚ್ಚೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸಂಭಾವ್ಯ ಪ್ರವಾಹ, ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವಂತೆ ಹೇಳಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.

ಇದನ್ನೂ ಓದಿ:ಇಂಗ್ಲೆಂಡ್, ಅಫ್ಘಾನಿಸ್ತಾನ್ ಯಾವುದೂ ಅಲ್ಲ.. ಈ ತಂಡ ವಿಶ್ವಕಪ್ ಗೆಲ್ಲುತ್ತೆ ಎಂದ ಮಾಜಿ ಕ್ರಿಕೆಟಿಗ

publive-image

ಅಪಾಯಕಾರಿ ಮನೆಗಳ ಸರ್ವೆಗೆ ಕೃಷ್ಣ ಬೈರೇಗೌಡ ಸೂಚನೆ
ಮಂಗಳೂರು: ಮಂಗಳೂರಿನ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರದಲ್ಲಿ ತಡೆಗೋಡೆ ಕುಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಸಚಿವ ಕೃಷ್ಣ ಬೈರೇಗೌಡ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಹೇಳಿದ್ದಾರೆ.

Advertisment

publive-image

ಮಂಗಳೂರಲ್ಲಿ ಭಾರೀ ಮಳೆ ಹಿನ್ನೆಲೆ ಪಡೀಲು ರೈಲ್ವೇ ಬ್ರಿಡ್ಜ್ ಅಂಡರ್ ಪಾಸ್ ಅಂದ್ರೆ ಪಡೀಲುನಿಂದ ಬಜಾಲ್​ಗೆ ತೆರಳೋ ಅಂಡರ್ ಪಾಸ್ ರಸ್ತೆಯಲ್ಲಿ ಮಳೆ ನೀರು ತುಂಬಿದ್ದು, ಅವಾಂತರ ಸೃಷ್ಟಿಯಾಗಿದೆ. ನೀರು ತುಂಬಿದ ಅಂಡರ್ ಪಾಸ್ ದಾಟಲು ಯತ್ನಿಸಿದ ಕಾರು ನೀರಿನಲ್ಲೇ ಸಿಲುಕಿ ಕೆಟ್ಟು ನಿಂತಿದೆ. ಅರ್ಧ ರಸ್ತೆಯವರೆಗೆ ಹೋಗಿ ಮಧ್ಯದಲ್ಲೇ ನಿಂತಿದ್ದು ಬಳಿಕ ನೀರು ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡಲಾಯ್ತು.

ಇದನ್ನೂ ಓದಿ:ನತದೃಷ್ಟ ಹೆಣ್ಣಿನ ಗರ್ಭದಲ್ಲಿರೋ ಮಗುವಿಗೆ ಈ ಭಾಗ್ಯನೂ ಇಲ್ವಲ್ಲ -ದರ್ಶನ್ ಕಣ್ಣೀರು ಇಟ್ಟಿದ್ಕೆ ಸಂಬರಗಿ ಹೇಳಿದ್ದೇನು..?

publive-image

ಕೊಡಗಿನಲ್ಲೂ ಮಳೆ ತೀವ್ರಗೊಂಡ ಹಿನ್ನೆಲೆ ರಜೆ‌ ಘೋಷಣೆ
ಕೊಡಗು ಜಿಲ್ಲೆಯಲ್ಲಿ ಸಂಜೆಯಿಂದ ಮಳೆ ತೀವ್ರಗೊಂಡ ಹಿನ್ನೆಲೆ ಜಿಲ್ಲೆಯ ವಿರಾಜಪೇಟೆ ಮತ್ತು ಪೊನ್ನಂಪೇಟೆ ಸೇರಿ ಮೂರು ತಾಲೂಕಿನ‌ ಶಾಲೆಗಳಿಗೆ ಇಂದು ರಜೆ‌ ಘೋಷಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

Advertisment

ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರಿದಿದ್ದು, ಬ್ರಹ್ಮಗಿರಿ ತಪ್ಪಲಿನಲ್ಲಿ ಮಳೆಯು ತೀವ್ರಗೊಂಡಿದೆ. ಪರಿಣಾಮ ಪವಿತ್ರ ಕ್ಷೇತ್ರ ಭಾಗಮಂಡಲದ‌ ತ್ರಿವೇಣಿ ಸಂಗಮ ಭರ್ತಿಯಾಗಿದೆ. ಕಾವೇರಿ, ಕನ್ನಿಕೆ & ಸುಜೋತಿ ನದಿಗಳು ಸೇರುವ ಸ್ಥಳವಾದ ಸಂಗಮದ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗಿದೆ.

ಕಾಫಿನಾಡು ಮಲೆನಾಡು ಭಾಗದಲ್ಲಿ ಮುಂದುವರೆದ ಮಳೆ ಅಬ್ಬರ
ಮಲೆನಾಡು ಚಿಕ್ಕಮಗಳೂರು ಜಿಲ್ಲೆಯಲ್ಲೂ ಮಳೆಯ ಅಬ್ಬರ ಮುಂದುವರೆದಿದೆ. ಬಿಟ್ಟು-ಬಿಟ್ಟು ಸುರಿದ ಧಾರಾಕಾರ ಮಳೆಗೆ ಮಲೆನಾಡಿಗರ ಜೀವನ ಅಸ್ತವ್ಯಸ್ತವಾಗಿದೆ. ತಾಲೂಕುಗಳಾದ ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಕಳಸ ಸೇರಿ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಸುತ್ತ ಭಾರೀ ಮಳೆಯಾಗ್ತಿದೆ. ಭಾರೀ ಪ್ರಮಾಣದಲ್ಲಿ ಬೀಸ್ತೀರೊ ಗಾಳಿ-ಮಳೆ ಮಧ್ಯೆ ಚಾರ್ಮಾಡಿ ಘಾಟಿಯಲ್ಲಿ ವಾಹನ ಸವಾರರು ಪರದಾಡುವಂತಾಗಿದೆ.

ಇದನ್ನೂ ಓದಿ:ಭಾರತ-ಇಂಗ್ಲೆಂಡ್ ಪಂದ್ಯಕ್ಕೆ ಮೀಸಲು ದಿನ ಇಲ್ಲ.. ಮಳೆಯಿಂದ ಪಂದ್ಯ ರದ್ದಾದರೆ ಫೈನಲ್​ಗೆ ಹೋಗೋದ್ಯಾರು?

Advertisment

ಒಟ್ಟಾರೆ ರಾಜ್ಯದಲ್ಲಿ ವರುಣನ ಅಬ್ಬರ ಶುರುವಾಗಿದ್ದು ಈಗಾಗಲೇ ಜನಜೀವನ ಅಸ್ತವ್ಯಸ್ತವಾಗಿದೆ. ಕಡಲನಗರಿಯಲ್ಲಿ ಜೀವಹಾನಿಯಾಗಿದ್ದು ಕಡಲತಡಿಯ ಜನರಿಗೆ ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.
ನ್ಯೂಸ್​ ಫಸ್ಟ್​ ಬ್ಯೂರೋ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment