newsfirstkannada.com

ಕೊಡಗಿನಲ್ಲಿ ಭಾರೀ ಮಳೆಗೆ ಅನಾಹುತ; ಮನೆ ಮೇಲೆ ಬೃಹತ್ ಮರ ಬಿದ್ದು ಮಹಿಳೆ ಸ್ಥಿತಿ ಗಂಭೀರ

Share :

Published April 24, 2024 at 10:47am

  ಗಾಳಿ ಸಹಿತ ಭೀಕರ ಮಳೆಯಿಂದ ಧರೆಗುರುಳಿದ ಬೃಹತ್ ಮರ

  ಬಿಸಿಲಿನ ಬೇಗೆಗೆ ಕಂಗೆಟ್ಟಿದ್ದ ಜನತೆಗೆ ತಂಪೆರೆದ ಮಳೆರಾಯ

  ಮನೆ ಮುಂದೆ ನಿಲ್ಲಿಸಿದ ಕಾರು, ಸ್ಕೂಟಿ, ಆಟೋರಿಕ್ಷಾ ನಜ್ಜುಗುಜ್ಜು

ಕೊಡಗು: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ಕೊನೆಗೂ ತಂಪೆರೆದಿದ್ದಾನೆ. ಭಾರೀ ಗಾಳಿ ಮಳೆಗೆ ದೊಡ್ಡ ಅವಾಂತರ ಸೃಷ್ಟಿಯಾಗಿದೆ. ಕೊಡಗು ಜಿಲ್ಲೆಯಲ್ಲಿ ಗಾಳಿ, ಮಳೆಗೆ ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮಹಿಳೆಯೊಬ್ಬರಿಗೆ ಗಾಯಗಳಾಗಿವೆ.

ಇದನ್ನೂ ಓದಿ: ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬಹಿರಂಗ ಮತಯಾಚನೆಗೆ ತೆರೆ, ಸ್ಪರ್ಧಾ ಕಣದಲ್ಲಿ ಎಷ್ಟು ಅಭ್ಯರ್ಥಿಗಳಿದ್ದಾರೆ ಗೊತ್ತಾ?

ಸೋಮ ಎಂಬುವವರ ಪತ್ನಿ ಭೋಜಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ ಸಂಜೆ ಸುರಿದ ಗಾಳಿ ಸಹಿತ ಮಳೆಯಿಂದ ತಿತಿಮತಿ ಬಳಿಯ ಕಾರೆಕಂಡಿ ಹಾಡಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರು, ಸ್ಕೂಟಿ, ಆಟೋರಿಕ್ಷಾ ಸ್ಥಳದಲ್ಲೇ ಜಖಂಗೊಂಡಿವೆ.

ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕೊಡಗಿನಲ್ಲಿ ಭಾರೀ ಮಳೆಗೆ ಅನಾಹುತ; ಮನೆ ಮೇಲೆ ಬೃಹತ್ ಮರ ಬಿದ್ದು ಮಹಿಳೆ ಸ್ಥಿತಿ ಗಂಭೀರ

https://newsfirstlive.com/wp-content/uploads/2024/04/rain-6.jpg

Load More