ಮತ್ತೆ ಭಾರೀ ಮಳೆ.. ಈ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

author-image
Ganesh
Updated On
ಕೊಂಚ ರಿಲ್ಯಾಕ್ಸ್​ ಕೊಟ್ಟ ಮಳೆರಾಯ.. ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ..
Advertisment
  • ಮುಂಜಾಗೃತ ಕ್ರಮವಾಗಿ ಜಿಲ್ಲಾಧಿಕಾರಿಗಳಿಂದ ಆದೇಶ
  • ನಿನ್ನೆ ಇಡೀ ದಿನ ಸುರಿದ ಭಾರೀ ಮಳೆಗೆ ಅನಾಹುತ ಸೃಷ್ಟಿ
  • ಅಲ್ಲಲ್ಲಿ ಗುಡ್ಡ ಕುಸಿತ, ರಸ್ತೆ ಸಂಚಾರ ಬಂದ್ ಆಗಿದೆ

ಭಾರೀ ಮಳೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳದ ಅಂಗನವಾಡಿ ಹಾಗೂ ಶಾಲೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.

ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಮುಂಜಾಗೃತ ಕ್ರಮವಾಗಿ ರಜೆ ಘೋಷಣೆ ಮಾಡಿದ್ದಾರೆ. ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ. ನಿನ್ನೆಯಿಂದ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಭಾರೀ ಅವಾಂತರ ಸೃಷ್ಟಿಯಾಗಿದೆ.

ಇದನ್ನೂ ಓದಿ: ಆಯೋಗದ ವರದಿಯಿಂದ ಬಿಗ್ ಶಾಕ್.. ಮತದಾರರ ಪಟ್ಟಿಯಿಂದ 52 ಲಕ್ಷ ವೋಟರ್ಸ್​ ಔಟ್​

ಕೇವಲ ಕರಾವಳಿ ತಾಲೂಕುಗಳು ಮಾತ್ರವಲ್ಲ, ಮಲೆನಾಡು ಭಾಗದಲ್ಲೂ ಭಾರೀ ಮಳೆಯಾಗುತ್ತಿದೆ. ಕೊಂಚ ಬಿಡುವುಕೊಟ್ಟಿದ್ದ ಮಳೆರಾಯ ಮತ್ತೆ ಆರ್ಭಟಿಸಲು ಶುರುಮಾಡಿದ್ದಾನೆ. ಇದರಿಂದ ಆ ಭಾಗದ ಜನ ಜೀವನ ಸಹಜವಾಗಿಯೇ ಅಸ್ತವ್ಯಸ್ತಗೊಂಡಿದೆ. ಅಲ್ಲಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್, ಸಂಪರ್ಕ ಕೂಡ ಕಡಿತಗೊಂಡಿದೆ.

ಇದನ್ನೂ ಓದಿ: ಇವತ್ತಿನಿಂದ ಧರ್ಮಸ್ಥಳ ಕೇಸ್​ನ ಅಸಲಿ ರಹಸ್ಯ ಹುಡುಕಾಟ.. SITಗೆ ಹೆಚ್ಚುವರಿಯಾಗಿ 20 ಅಧಿಕಾರಿಗಳ ನೇಮಕ

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment