/newsfirstlive-kannada/media/post_attachments/wp-content/uploads/2023/07/Rain-and-School-Students.jpg)
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ನಿರಂತರ ಮಳೆಯಿಂದಾಗಿ ಜನರು ಕಂಗೆಟ್ಟಿದ್ದಾರೆ. ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಎಲ್ಲಾ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ: ಬೈಕ್ಗೆ ಡಿಕ್ಕಿ ಹೊಡೆದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್.. ಸವಾರ ಸ್ಥಳದಲ್ಲೇ ಸಾವು
ಡಿಸಿ ಮುಲ್ಲೈ ಮುಗಿಲನ್ ದಕ್ಷಿಣ ಕನ್ನಡದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಮುನ್ಸೂಚನೆ ಗಮನಿಸಿ ರಜೆ ಘೋಷಿಸಿ ಎಂದು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಓಡೋಡಿ ಬಂದ ಬಾಲಿವುಡ್ ದಂಡು.. ದೈವದ ಬಳಿ ನಟಿ ಕತ್ರಿನಾ ಕೈಫ್ ಬೇಡಿಕೊಂಡಿದ್ದೇನು?
ಹವಾಮಾನ ಇಲಾಖೆಯು ಸಹ ಭಾರೀ ಗಾಳಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ರೆಡ್ ಅಲರ್ಟ್ ನೀಡಿದೆ. ಜೊತೆಗೆ ಜನರಿಗೆ ಎಚ್ಚರಿಕೆ ವಹಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ