newsfirstkannada.com

RAIN ALERT: ಮುಂದಿನ 2 ವಾರ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ; ಎಲ್ಲೆಲ್ಲಿ?

Share :

Published May 2, 2024 at 4:21pm

    ನೆತ್ತಿ ಸುಡುವಂತ ಬಿರು ಬಿಸಿಲಿಗೆ ಹೈರಾಣಾಗಿದ್ದ ರಾಜ್ಯದ ಜನತೆಗೆ ನಿಟ್ಟುಸಿರು

    ಬಿರು ಬಿಸಿಲಿನ ಮಧ್ಯೆ ಹವಾಮಾನ ಇಲಾಖೆ ಕೊಟ್ಟ ಗುಡ್​​ನ್ಯೂಸ್​ ಏನು?

    ಬೆಂಗಳೂರಿನಲ್ಲಿ ಇದೇ ವಾರದಲ್ಲಿ ಭರ್ಜರಿ ಮಳೆ ಬೀಳುವ ಸಾಧ್ಯತೆ

ಅಬ್ಬಾ.. ನೆತ್ತಿ ಸುಡುವಂತ ಬಿರು ಬಿಸಿಲಿಗೆ ರಾಜ್ಯದ ಜನತೆ ಹೈರಾಣಾಗಿದ್ದಾರೆ. ಈ ಮಧ್ಯೆ ಬಿಸಿಲ ಧಗೆಯಿಂದ ಕಂಗೆಟ್ಟಿದ್ದ ಕರ್ನಾಟಕದ ಜನತೆಗೆ ಹವಾಮಾನ ಇಲಾಖೆ ಗುಡ್​​ನ್ಯೂಸ್​ವೊಂದನ್ನು ನೀಡಿದೆ. ಮೇ ತಿಂಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ. ಇದರ ಜೊತೆಗೆ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಇದನ್ನೂ ಓದಿ: ಕೋವಿಶೀಲ್ಡ್ ಭಯ.. ನಿಜಕ್ಕೂ ಮಾರಣಾಂತಿಕ ಸೈಡ್ ಎಫೆಕ್ಟ್‌ ಇದೆಯಾ? ತಜ್ಞ ವೈದ್ಯರು ಹೇಳೋದೇನು?

ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಇಂತಹ ಕಡು ಬಿಸಿಲಿನಲ್ಲಿ ಮಳೆ ಬಂದರೆ ಸಾಕಪ್ಪಾ ಎಂದು ಹಾತೊರೆಯುವ ಪರಿಸ್ಥಿತಿ ಬಂದಿದೆ. ಜನ ಕೂಡ ಭಾರಿ ಮಳೆಯಾಗಲಿ ಎಂದು ಜನರು ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ. ಹೀಗಾಗಿ ಮಳೆ ಬರದೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬರ ಎದುರಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಹವಾಮಾನ ಇಲಾಖೆ ಭರ್ಜರಿ ಮಳೆ ಸುರಿಯುವ ಸಿಹಿ ಸುದ್ದಿ ಸಿಕ್ಕಿದೆ.

ಮೇ ತಿಂಗಳ ಮೊದಲ ವಾರದಲ್ಲಿ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆ ಬರಲಿದೆ ಎನ್ನಲಾಗಿದೆ. ಜೊತೆಗೆ ಬೆಂಗಳೂರು, ಮೈಸೂರು, ಹಾಸನ ಸೇರಿ ರಾಮನಗರ, ಮಂಡ್ಯ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಕೂಡ ಭರ್ಜರಿ ಮಳೆ ಬೀಳಲಿದೆ ಎಂದು ಹವಾಮಾನ ತಜ್ಞರ ಮಾಹಿತಿ ನೀಡಿದ್ದಾರೆ. ಇನ್ನೊಂದು ವಿಚಾರ ಎಂದರೆ ಬೆಂಗಳೂರಿನಲ್ಲಿ ಇದೇ ವಾರದಲ್ಲಿ ಭರ್ಜರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

RAIN ALERT: ಮುಂದಿನ 2 ವಾರ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ; ಎಲ್ಲೆಲ್ಲಿ?

https://newsfirstlive.com/wp-content/uploads/2024/05/rain22.jpg

Load More