newsfirstkannada.com

ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಧೋ ಎಂದು ಸುರಿಯುತ್ತಿರೋ ಮಳೆ; ಜನ ತತ್ತರ!

Share :

Published June 6, 2024 at 7:38pm

    ಕಳೆದ ಗಂಟೆಗಳಿಂದ ಸುರಿಯುತ್ತಿರುವ ಮಳೆಗೆ ತತ್ತರಿಸಿ ಹೋದ ಸಾರ್ವಜನಿಕರು

    ಮಧ್ಯಾಹ್ನ ಸುರಿದ ಭಾರೀ ಮಳೆಗೆ ಟೀಚರ್ಸ್ ಕಾಲೋನಿಯ ರಸ್ತೆಗಳಲ್ಲಿ ನೀರು

    ಗುಡುಗು, ಮಿಂಚು ಸಮೇತ ರಾಜ್ಯದಲ್ಲಿ ಸುರಿಯುತ್ತಿರೋ ಧಾರಾಕಾರ ಮಳೆ

ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಗುಡುಗು, ಮಿಂಚು ಸಮೇತ ಧಾರಾಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಈ ಬೆನ್ನಲ್ಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದೆ.

ಇದನ್ನೂ ಓದಿ: ಮುಳುಗುತ್ತಿದ್ದ ಹಡಗಿಗೆ ಸಾರಥಿ ಆದ್ಮೇಲೆ ಹಣೆಬರಹ ಚೇಂಜ್​.. ಕನ್ನಡಿಗ​ ಖರ್ಗೆ ಕಾಂಗ್ರೆಸ್​​ಗೆ ಬಲ ತುಂಬಿದ್ದೇಗೆ?

ಇನ್ನು, ಕಾಫಿ ನಾಡು ಚಿಕ್ಕಮಗಳೂರಿನ ಕೆಲವೆಡೆ ಧಾರಾಕಾರವಾಗಿ ಮಳೆಯಾಗಿದೆ. ಮಧ್ಯಾಹ್ನ ಸುರಿದ ಭಾರಿ ಮಳೆಯಿಂದ ಟೀಚರ್ಸ್ ಕಾಲೋನಿಯ ರಸ್ತೆಗಳಲ್ಲಿ ನೀರು ಹರಿದು ಬರುತ್ತಿವೆ. ಇನ್ನೂ ಕೆಲವು ಮನೆಗಳಿಗೂ ಮಳೆ ನೀರು ನುಗ್ಗಿದೆ.
ಇತ್ತ, ಮಂಡ್ಯದಲ್ಲಿ ಜಿಲ್ಲೆಯ ಹಲವೆಡೆ ಭರ್ಜರಿ ಮಳೆಯಾಗಿದೆ, 20 ನಿಮಿಷಗಳಿಂದ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಇಂಡುವಾಳು, ಬೇಲೂರು, ಹೊಳಲು ಸೇರಿ ಹಲವು ಕಡೆಗಳಲ್ಲಿ ಮರುಣನ ಆರ್ಭಟ ಜೋರಾಗಿದೆ. ಇನ್ನು, ಮುಂಗಾರು ಮಳೆ ಚುರುಕು ಪಡೆದ ಹಿನ್ನಲೆಯಲ್ಲಿ ರೈತರ ಮೊಗದಲ್ಲಿ ಸಂತಸ ಮೂಡಿದೆ.

ಇದನ್ನೂ ಓದಿ: ಧಮ್ ಹೊಡೆಯೋದ್ರಲ್ಲೂ ರಾಜ್ಯದ ಹೆಣ್ಮಕ್ಕಳೇ ಮೇಲುಗೈ; ಈ ಸ್ಟೋರಿ ಓದಿದ್ರೆ ಶಾಕ್ ಆಗ್ತೀರಾ!

ಇನ್ನೂ ಕೋಲಾರದಲ್ಲೂ ಭಾರೀ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್ ಪಾಸ್ ರಸ್ತೆ ಬಂದ್​ ಆಗಿದೆ. ಅಂಡರ್ ಪಾಸ್ ರಸ್ತೆ ಬಂದ್​ ಆಗಿದ್ದಕ್ಕೆ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ. ಹೀಗಾಗಿ ಕಿಲೋ ಮೀಟರ್​ವರೆಗೆ ಸಾಕಷ್ಟು ವಾಹನಗಳು ಸಾಲುಗಟ್ಟಿ ನಿಂತುಕೊಂಡಿವೆ. ಶಾಲಾ‌ಮಕ್ಕಳು ಮನೆಗೆ ತೆರಳಲು ಕೂಡ ಹರಸಾಹಸ ಪಟ್ಟಿದ್ದಾರೆ. ರೈಲ್ವೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಹಿಡಿಶಾಪ ಹಾಕುತ್ತಿದ್ದಾರೆ. ಪ್ರತಿಸಲ ಮಳೆಯಾದಾಗಲೂ ಇದೇ ಪರಿಸ್ಥಿತಿ. ಮಾವಿನ ಮಾರುಕಟ್ಟೆಗೆ ತೆರಳಲು ಇರುವ ಏಕೈಕ ಮಾರ್ಗ ಇದು ಒಂದೆಯಾಗಿದೆ. ಇದೇ ಮಾರ್ಗದಲ್ಲೇ ಹೀಗೆ ಆಗಿದೆ ಅಂತ ಬೇಸರ ಹೊರ ಹಾಕುತ್ತಿದ್ದಾರೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಮಲೆನಾಡು, ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ ಸೇರಿದಂತೆ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ಮೈಸೂರು & ಉಡುಪಿ, ಮಂಗಳೂರು, ಉತ್ತರ ಕನ್ನಡ, ತುಮಕೂರು, ಹಾಸನ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮಳೆ ಸುರಿಯಲಿದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಧೋ ಎಂದು ಸುರಿಯುತ್ತಿರೋ ಮಳೆ; ಜನ ತತ್ತರ!

https://newsfirstlive.com/wp-content/uploads/2024/06/rain-2.jpg

Load More