ಸಿಲಿಕಾನ್ ಸಿಟಿಯಲ್ಲಿ ಮತ್ತೆ ವರುಣನ ಆರ್ಭಟ
ಧಾರಾಕಾರ ಮಳೆಗೆ ಕೆರೆಯಂತಾದ ರಸ್ತೆಗಳು
ಹವಾಮಾನ ಇಲಾಖೆ ಕೊಟ್ಟಿದೆ ಅಲರ್ಟ್
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಮಳೆರಾಯನ ಆರ್ಭಟ ಜೋರಾಗಿದೆ. ಧಾರಾಕಾರ ಸುರಿದ ಮಳೆಗೆ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ. ದಿಢೀರ್ ಮಳೆಯಿಂದ ರಸ್ತೆ ಬದಿಯ ವ್ಯಾಪಾರಿಗಳಿಗೆ ತೊಂದರೆ ಉಂಟಾಗಿದೆ. ರಾಜ್ಯಕ್ಕೆ ನೈಋತ್ಯ ಮುಂಗಾರು ಪ್ರವೇಶವಾಗಿದ್ದು, ಇಂದಿನಿಂದ ನಾಲ್ಕು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು, ಕಾರ್ಪೊರೇಷನ್, ಶಾಂತಿನಗರ, ಮೆಜೆಸ್ಟಿಕ್, ಕೆ.ಆರ್. ಮಾರ್ಕೆಟ್, ವಿಜಯನಗರ, ರಾಜಾಜಿನಗರ, ಶೇಷಾದ್ರಿಪುರಂ, ಬಸವನಗುಡಿ, ಬಾಣಸವಾಡಿ, ಸದಾಶಿವನಗರ, ನಾಯಂಡಹಳ್ಳಿ, ವಸಂತನಗರ, ಹೆಬ್ಬಾಳ, ಮಲ್ಲೇಶ್ವರಂ ಭಾಗದಲ್ಲಿ ಭಾರಿ ಮಳೆಯಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ