newsfirstkannada.com

ಬೆಂಗಳೂರಲ್ಲಿ ವರುಣನ ಆರ್ಭಟ; ಧಾರಾಕಾರ ಮಳೆಯಿಂದ ವಾಹನ ಸವಾರರ ಪರದಾಟ; ಎಲ್ಲೆಲ್ಲಿ ಏನಾಯ್ತು?

Share :

Published May 8, 2024 at 7:30pm

Update May 8, 2024 at 7:25pm

    ಮೇ 13 ಹಾಗೂ 14ರಂದು ರಾಜ್ಯಾದ್ಯಂತ ಹೆಚ್ಚಿನ ಪ್ರಮಾಣದ ಮಳೆ ಸಾಧ್ಯತೆ

    1 ವಾರ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಹವಮಾನ ಇಲಾಖೆ ಮುನ್ಸೂಚನೆ

    ದಿಢೀರ್​ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಮಳೆರಾಯನ ಆರ್ಭಟ ಜೋರಾಗಿದೆ. ಇಷ್ಟು ದಿನ ಮಳೆ ಬಂದ್ರೆ ಸಾಕಪ್ಪ ಅಂತ ಅಂದುಕೊಳ್ಳುತ್ತಿದ್ದ ಜನ ದಿಢೀರ್​ ಮಳೆಯಿಂದ ಹೈರಾಣಾಗಿದ್ದಾರೆ. ಬೆಂಗಳೂರಿಗೆ ಮಳೆರಾಯ ಎಂಟ್ರಿ ಕೊಡುತ್ತಿದ್ದಂತೆ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ.

ಹೌದು, ನಗರದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು ವಾಹನ ಸಂಚಾರಕ್ಕೆ ಅಡೆತಡೆಯಾಗಿದೆ. ಕೆ.ಆರ್ ಸರ್ಕಲ್, ಜೆ.ಸಿ ರಸ್ತೆ, ಮೈಸೂರ್ ಬ್ಯಾಂಕ್ ಸರ್ಕಲ್, ಕೆ.ಆರ್.ಮಾರ್ಕೆಟ್, ವಿಜಯನಗರ, ಯಲಹಂಕ, ಮೆಜೆಸ್ಟಿಕ್, ಚಿಕ್ಕಪೇಟೆ, ರಾಜಾಜಿನಗರ, ನಾಯಂಡನಹಳ್ಳಿ, ನೆಲಮಂಗಲ, ಪುಲಿಕೇಶಿ ನಗರ, ಹುಳಿಮಾವು, ವಸಂತನಗರ ಭಾರೀ ಮಳೆಯಾಗಿದೆ.  ಬೆಂಗಳೂರು ಸೇರಿದಂತೆ ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿತ್ತು.

ಇದನ್ನೂ ಓದಿ: ವಾರ್ಡ್..​ ವಾರ್ಡ್​ಗೆ ಸ್ಕೂಟಿಯಲ್ಲಿ ಹೋಗಿ ಚಿಕಿತ್ಸೆ ಕೊಡ್ತಾರೆ ಈ ನರ್ಸ್​; ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!!

ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಿಗೆ ಮಳೆ ವ್ಯಾಪಿಸಲಿದ್ದು, ಸತತ ಏಳು ದಿನ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಇನ್ನು, ಮೇ 13 ಹಾಗೂ 14ರಂದು ರಾಜ್ಯಾದ್ಯಂತ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ.

ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಬುಧವಾರದಿಂದಲೇ ಮಳೆ ಆರಂಭಗೊಳ್ಳಲಿದ್ದು, ನಂತರದ ದಿನಗಳಲ್ಲಿ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಮಳೆ ವ್ಯಾಪಿಸಲಿದೆ ಅಂತ ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಇನ್ನು, ಮೇ 13 ಹಾಗೂ 14ರಂದು ರಾಜ್ಯಾದ್ಯಂತ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಹೀಗಾಗಿ ಸಿಲಿಕಾನ್​ ಸಿಟಿಯಲ್ಲಿ ಸಂಜೆಯಾಗುತ್ತಿದ್ದಂತೆ ಮಳೆ ಆರ್ಭಟ ಜೋರಾಗುತ್ತಿದೆ. ಹೀಗಾಗಿ ಜನರು ಮನೆಯಿಂದ ಹೊರ ಬರೋದಕ್ಕೂ ಮುಂಚೆ ಕೊಡೆ, ರೈನ್ ಕೋಟ್ ಜೊತೆಗೆ ತೆಗೆದುಕೊಂಡು ಬಂದರೆ ಉತ್ತಮ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರಲ್ಲಿ ವರುಣನ ಆರ್ಭಟ; ಧಾರಾಕಾರ ಮಳೆಯಿಂದ ವಾಹನ ಸವಾರರ ಪರದಾಟ; ಎಲ್ಲೆಲ್ಲಿ ಏನಾಯ್ತು?

https://newsfirstlive.com/wp-content/uploads/2024/05/bng-rain10.jpg

Load More