/newsfirstlive-kannada/media/post_attachments/wp-content/uploads/2024/10/Chennai-on-alert-for-heavy-rain.jpg)
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಬೆಳಂಬೆಳಗ್ಗೆ ಧಾರಾಕಾರ ಮಳೆ ಸುರಿಯುತ್ತಿದ್ದು, ಜನ ಸಾಮಾನ್ಯರು ಪರದಾಡುವಂತೆ ಆಗಿದೆ. ಬೆಳಗ್ಗೆ 4 ಗಂಟೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದಿನ ನಿತ್ಯದ ಕೆಲಸ ಕಾರ್ಯಗಳಿಗೆ ಭಾರೀ ತೊಂದರೆ ಆಗಿದೆ.
ನಿರಂತರ ಮಳೆಯಿಂದಾಗಿ ಬೆಂಗಳೂರು ಜನ ತತ್ತರಿಸಿದ್ದಾರೆ.. ಬಿಡದೆ ಸುರಿಯುತ್ತಿರುವ ಮಳೆಗೆ ಕೆಲಸ ಕಾರ್ಯಗಳಿಗೆ ಬ್ರೇಕ್ ಬೀಳ್ತಿದ್ದು, ಜನ ಹೈರಾಣಾಗಿದ್ದಾರೆ.. ಇನ್ನು ನಿನ್ನೆ ರಾತ್ರಿಯೂ ನಗರದಲ್ಲಿ ಧಾರಾಕಾರ ಮಳೆಯಾಗಿದ್ದು, ಟ್ರಾಫಿಕ್ ಜಾಮ್​ನಿಂದ ಕಾರ್ಪೊರೇಷನ್ ಸರ್ಕಲ್, ಕೆ.ಆರ್.ಮಾರ್ಕೆಟ್ ಸುತ್ತಮುತ್ತ ವಾಹನ ಸವಾರರು ಪರದಾಡಿದ್ದಾರೆ.
ಇತ್ತ ನಿನ್ನೆ ರಾತ್ರಿಯ ಮಳೆಗೆ ಬ್ಯಾಟರಾಯನಪುರದ ಮನೆಗಳಿಗೆ ನೀರು ನುಗ್ಗಿ ಕುಟುಂಬಸ್ಥರು ಪರದಾಡಿದ್ದಾರೆ.. ಎರಡು ಅಡಿಯಷ್ಟು ನಿಂತ ಮಳೆ ನೀರಲ್ಲೇ ನಿವಾಸಿಗಳು ದಿನ ಕಳೆಯುವಂತಾಗಿದೆ.
ಇದನ್ನೂ ಓದಿ:ಇಡೀ ದಿನ ಸುರಿದ ಮಳೆಗೆ ತತ್ತರಿಸಿದ ಬೆಂಗಳೂರು; ಯಾವ ಏರಿಯಾದಲ್ಲಿ ಏನೇನಾಯ್ತು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us