/newsfirstlive-kannada/media/post_attachments/wp-content/uploads/2024/10/bng-rain1.jpg)
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಮಳೆರಾಯನ ಆರ್ಭಟ ಜೋರಾಗಿದೆ. ನಿನ್ನೆ ರಾತ್ರಿಯಿಂದಲೇ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ. ಸಂಜೆಯಿಂದಲೇ ಸಿಲಿಕಾನ್ ಸಿಟಿಯಲ್ಲಿ ಜೋರು ಮಳೆ ಬೀಳ್ತಿದ್ದು ಹಲವು ಕಡೆ ನೀರು ನಿಂತಿದೆ.
ಇದನ್ನೂ ಓದಿ: BBK11 ಇಂದು ಕಿಚ್ಚನ ಮೊದಲ ಮಾತುಕತೆ; ಈ ಸ್ಪರ್ಧಿಗಳಿಗೆ ಪುಕಪುಕ..! ವಿಡಿಯೋ
ಕೆ.ಆರ್ ಮಾರುಕಟ್ಟೆ, ರಾಜಾಜಿನಗರ, ವಿಜಯನಗರ, ಬನಶಂಕರಿ, ಮೆಜೆಸ್ಟಿಕ್, ಮಲ್ಲೇಶ್ವರಂ, ವೈಟ್ ಫೀಲ್ಡ್, ಮಾರತ್ ಹಳ್ಳಿ, ಹೆಬ್ಬಾಳ ಸೇರಿ ಹಲವು ಕಡೆ ಭಾರಿ ಮಳೆಯಾಗಿದೆ. ಕಾರ್ಪೊರೇಷನ್, ಶಾಂತಿನಗರ, ವಿಲ್ಸನ್ ಗಾರ್ಡನ್, ಕೋರಮಂಗಲ, ಜೆಪಿ ನಗರ, ಲಾಲ್ ಬಾಗ್ ಬಸವನಗುಡಿ ಸೇರಿದಂತೆ ಹಲವೆಡೆ ಧಾರಾಕಾರವಾಗಿ ಮಳೆಯಾಗುತ್ತಿದೆ.
ಇನ್ನೂ ಸಿಲಿಕಾನ್ ಸಿಟಿಯಲ್ಲಿ ಸಂಜೆಯಾಗುತ್ತಲೇ ಮಳೆ ಆರ್ಭಟ ಜೋರಾಗಿದೆ. ರಣ ಭೀಕರ ಮಳೆಯಿಂದಾಗಿ ಪಣತ್ತೂರು ರೈಲ್ವೆ ಬ್ರಿಡ್ಜ್ ಕೆಳಗೆ ನೀರು ನಿಂತಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ. ಇನ್ನು ಬೆಂಗಳೂರಿನಲ್ಲಿ ತಡರಾತ್ರಿಯೂ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಯ ಹಲವೆಡೆ ಅಕ್ಟೋಬರ್ 10ರವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ