/newsfirstlive-kannada/media/post_attachments/wp-content/uploads/2024/04/ckm2.jpg)
ಚಿಕ್ಕಮಗಳೂರು: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಆದರೆ ಭಾರೀ ಮಳೆ ಪರಿಣಾಮ ಚಲಿಸುತ್ತಿದ್ದ ಕಾರಿನ ಮೇಲೆ ಏಕಾಏಕಿ ತೆಂಗಿನ ಮರ ಹಾಗೂ ವಿದ್ಯುತ್ ಕಂಬ ಬಿದ್ದಿದೆ. ಇದರಿಂದ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ದೇವರಾಜು (35) ಮೃತ ದುರ್ದೈವಿ.
ಇದನ್ನೂ ಓದಿ:ಮಾಯವಾದ ಮಳೆರಾಯ.. ಬೆಂಗಳೂರಿಗರಿಗೆ ಮತ್ತೆ ಶಾಕಿಂಗ್ ನ್ಯೂಸ್; ಹವಮಾನ ಇಲಾಖೆ ಎಚ್ಚರಿಕೆ!
ಈ ಘಟನೆ ಲಿಂದದಹಳ್ಳಿ ಭಾಗದಲ್ಲಿ ನಡೆದಿದೆ. ಕಾರೊಂದು ಲಿಂಗದಹಳ್ಳಿ ಸಮೀಪದ ಕಲ್ಲತ್ತಗಿರಿಗೆ ಪೂಜೆಗೆಂದು ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇನ್ನು, ಕಾರಿನಲ್ಲಿದ್ದ ಐವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಲಿಂಗದಳ್ಳಿ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ