newsfirstkannada.com

ಭಾರೀ ಮಳೆ.. ರಾಜ್ಯದ ಈ ಭಾಗದ ಶಾಲೆಗಳಿಗೆ ರಜೆ ಘೋಷಣೆ

Share :

Published July 4, 2024 at 9:31am

    ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಭಾರೀ ಮಳೆ

    ನದಿಗಳು, ಹಳ್ಳಗಳು ಅಪಾಯ ಮೀರಿ ಹರಿಯುತ್ತಿವೆ

    ಪ್ರವಾಸಿ ತಾಣಗಳಿಗೆ ನೋ ಎಂಟ್ರಿ ಎಂದ ಅಧಿಕಾರಿಗಳು

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಮುಂಜಾಗೃತ ಕ್ರಮವಾಗಿ ಕೆಲವು ಭಾಗಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಬೈಂದೂರು ಶಿಕ್ಷಣ ವಲಯ ವ್ಯಾಪ್ತಿಗೆ ರಜೆ ಘೋಷಣೆ ಮಾಡಲಾಗಿದೆ. ಒಂದರಿಂದ ಹತ್ತನೇ ತರಗತಿವರೆಗೆ ರಜೆ ನೀಡಲಾಗಿದೆ. ಬೈಂದೂರು ತಾಲೂಕಿಗೆ ರಜೆ ಇಲ್ಲ. ಬೈಂದೂರು ವಲಯಕ್ಕೆ ಮಾತ್ರ ರಜೆ ನೀಡಿದ್ದೇವೆ. ಭೌಗೋಳಿಕವಾಗಿ ತಗ್ಗು ಪ್ರದೇಶದಲ್ಲಿ ನೀರು ನುಗ್ಗುವ ಅಪಾಯ ಇರೋದ್ರಿಂದ ರಜೆ ನೀಡಲಾಗಿದೆ ಎಂದು ಉಡುಪಿ ಡಿಸಿ ಡಾ. ವಿದ್ಯಾ ಕುಮಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಪ್ರಿಯತಮೆ ಮೇಲೆ ಗುಂಡಿನ ಸುರಿಮಳೆಗೈದ ಪ್ರಿಯಕರ.. ಬಳಿಕ ತಾನೂ ಸಾವನ್ನಪ್ಪಿದ..

ಇತ್ತ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಗೆಯೇ, ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಕೆಲ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಲು ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ. ವನ್ಯಜೀವಿ ವಲಯದ ವ್ಯಾಪ್ತಿಗೆ ಬರೋ ಪ್ರವಾಸಿ ಸ್ಥಳಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಬೆಟ್ಟಗಳು-ಜಲಪಾತಗಳ ವೀಕ್ಷಣೆಗೆ ಅವಕಾಶ ಇರುವುದಿಲ್ಲ. ಬೆಳ್ತಂಗಡಿ ತಾಲೂಕಿನ ಗಡಾಯಿಕಲ್ಲು (ನರಸಿಂಹಗಡ)ಬೆಟ್ಟ, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಫಾಲ್ಸ್​​ಗಳ ವೀಕ್ಷಣೆಗೆ ಅವಕಾಶ ಇಲ್ಲ ಎಂದು ಅಧಿಕಾರಿಗಳು ಆದೇಶ ನೀಡಿದ್ದಾರೆ.

ಇದನ್ನೂ ಓದಿ:ಬುಲೆಟ್​​ನಲ್ಲಿ ಬಂದು ಆಟೋ ಚಾಲಕನ ತಲೆ ಒಡೆದ ಕಿರಿಕ್ ಲೇಡಿ..! ವಿಡಿಯೋ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಭಾರೀ ಮಳೆ.. ರಾಜ್ಯದ ಈ ಭಾಗದ ಶಾಲೆಗಳಿಗೆ ರಜೆ ಘೋಷಣೆ

https://newsfirstlive.com/wp-content/uploads/2024/07/SCHOOL-RAIN-2.jpg

Load More