/newsfirstlive-kannada/media/post_attachments/wp-content/uploads/2024/06/RAIN-24.jpg)
ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಕಳೆದ ವಾರದಿಂದ ಭರ್ಜರಿ ಮಳೆಯಾಗುತ್ತಿದೆ. ಇನ್ನಷ್ಟು ವರ್ಷಧಾರೆ ಸುರಿಯುವ ಸಂಭವ ಹಿನ್ನೆಲೆಯಲ್ಲಿ ಮುಂದಿನ 3 ಗಂಟೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಿಸಿದೆ.
ಇದನ್ನೂ ಓದಿ: ದರ್ಶನ್ ಮಾಸ್ ಹೀರೋ.. ಜನ ಥಿಯೇಟರ್ಗೆ ಬಂದೇ ಬರ್ತಾರೆ -ಬೇರೆಯದ್ದೇ ಇದೆ ಶಾಸ್ತ್ರಿ ರೀ-ರಿಲೀಸ್ ಲೆಕ್ಕಾಚಾರ..!
ಸಿಲಿಕಾನ್ ಸಿಟಿಯಲ್ಲಿ ಸಂಜೆಯಾಗುತ್ತಿದ್ದಂತೆ ಮಳೆ ಆರ್ಭಟ ಜೋರಾಗಿದೆ. ಈಗ ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ನೀಡಿದೆ. ಬೆಂಗಳೂರು ನಗರ, ಗ್ರಾಮಾಂತರ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ, ಗದಗ, ಧಾರವಾಡ, ಬಾಗಲಕೋಟೆ, ತುಮಕೂರು, ಮಂಡ್ಯ, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಿದೆ. ಇನ್ನು, ಧಾರಾಕಾರ ಮಳೆಯ ಜೊತೆಗೆ 30-40 ಕಿ.ಮೀ. ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಎಚ್ಚರಿಕೆ ಕೊಟ್ಟಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ