Advertisment

ಕರಾವಳಿಯಲ್ಲಿ ಕಣ್ಣೀರ ಮಳೆ.. ಮುಂದಿನ ನಾಲ್ಕೈದು ದಿನ ಭಾರೀ ಮಳೆ ಸುರಿಯುವ ಮುನ್ಸೂಚನೆ!

author-image
AS Harshith
Updated On
PHOTOS: ಕರಾವಳಿಯಲ್ಲಿ ಧಾರಾಕಾರ ಮಳೆ.. ಜನಜೀವನ ಅಸ್ತವ್ಯಸ್ತ, ಮೂಕ ಪ್ರಾಣಿಗಳಿಗೂ ಸಂಕಟ
Advertisment
  • ವರುಣಾರ್ಭಟಕ್ಕೆ ಕರಾವಳಿ ಜನರ ಜೀವನ ಅಸ್ತವ್ಯಸ್ತ
  • ಕಳೆದೊಂದು ವಾರದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ
  • ಕರಾವಳಿಯ ಈ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ವರುಣನ ಆರ್ಭಟ ಜೋರಾಗಿದೆ. ಜನ ಜೀವನ ಅಸ್ತವ್ಯಸ್ತವಾಗಿದೆ. ನಿರಂತರವಾಗಿ ವರುಣ ಕಾಡುತ್ತಿದ್ದಾನೆ. ಹೀಗಿರುವಾಗ ಇಂದಿನಿಂದ ಮತ್ತೆ ಮಳೆ ಆರ್ಭಟ ಮುಂದುವರಿಕೆ ಸಾಧ್ಯತೆಯಿದೆ.

Advertisment

ಮುಂದಿನ ನಾಲ್ಕೈದು ದಿನ ಕರಾವಳಿಗೆ ಭಾರೀ ಮಳೆಯ ಮುನ್ಸೂಚನೆ ಸಿಕ್ಕಿದೆ. ಈಗಾಗಲೇ ಕಳೆದೊಂದು ವಾರದಿಂದ ಕರಾವಳಿಯಲ್ಲಿ ಮಳೆ ಸುರಿಯುತ್ತಿದೆ. ಅನೇಕ ಕಡೆ ಪ್ರವಾಹ ಅವಾಂತರ ಕೂಡ ಸೃಷ್ಟಿಯಾಗಿದೆ.ಈ ಮಧ್ಯ ಮತ್ತೆ ನಾಲ್ಕೈದು ದಿನ ಭಾರೀ ಮಳೆಯ ಅಲರ್ಟ್ ಹೊರಡಿಸಲಾಗಿದೆ.

publive-image

ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳ ಬಹುತೇಕ ಕಡೆ ಗುಡುಗು, ಮಿಂಚು ಸಹಿತ ಭಾರೀ ಮಳೆ ಅಲರ್ಟ್ ಘೋಷಿಸಲಾಗಿದೆ. ಇಂದು ಆರೆಂಜ್, ನಾಳೆ ಯೆಲ್ಲೋ ಅಲರ್ಟ್, ಬಳಿಕ ಮತ್ತೆರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇನ್ನು ಉತ್ತರ ಒಳನಾಡು, ದಕ್ಷಿಣ ಒಳನಾಡಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತವರಣ ಮುಂದುವರಿದಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment