newsfirstkannada.com

ಮಂಗಳೂರಲ್ಲಿ ಭಾರೀ ಮಳೆ, ಶಾಲಾ-ಕಾಲೇಜುಗಳಿಗೆ ರಜೆ.. ಮುಂಗಾರು ಆರ್ಭಟಕ್ಕೆ ಮೊದಲ ಬಲಿ

Share :

04-07-2023

    ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಮೊದಲ ಬಲಿ

    ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

    ಅಲ್ಲಲ್ಲಿ ಗುಡ್ಡಕುಸಿತ ಭಯ.. ಎಚ್ಚರಿಕೆಯಿಂದ ಇರುವಂತೆ ಸೂಚನೆ

ಮಂಗಳೂರು: ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇಂದು ಕೂಡ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದೆ. ಇದರ ನಡುವೆ ರಾಜ್ಯದಲ್ಲಿ ಭಾರೀ ಮಳೆಗೆ ಮೊದಲ ಬಲಿಯಾಗಿದೆ.

ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಓರ್ವ ವ್ಯಕ್ತಿ ಮೃತಪಟ್ಟಿರೋ ಘಟನೆ ಹೊರ ವಲಯದ ಪಿಲಾರು ಎಂಬಲ್ಲಿ ನಡೆದಿದೆ. ಪಿಲಾರು ಬಳಿಯ ನಿವಾಸಿ ಸುರೇಶ್ ಗಟ್ಟಿ (52) ಮೃತ ವ್ಯಕ್ತಿ. ಸುರೇಶ್ ಗಟ್ಟಿ ಅವರು ಪೈಂಟಿಂಗ್ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸುರೇಶ್ ಗಟ್ಟಿ ಮನೆ ಸಮೀಪ ಕಾಲು ಸಂಕ ದಾಟುವ ವೇಳೆ ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.

ಶಾಲಾ ಕಾಲೇಜುಗಳಿಗೆ ರಜೆ

ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗಗಳಲ್ಲಿ ಈಗಾಗಲೇ ಮುಂಗಾರು ಪ್ರವೇಶ ಮಾಡಿದೆ. ಮಳೆಯ ಆರ್ಭಟ ಜೋರಾಗಿದ್ದು, ಅಲ್ಲಲ್ಲಿ ಗುಡ್ಡಕುಸಿತ ಸಂಭವಿಸುತ್ತಿದೆ. ಮಾತ್ರವಲ್ಲ ಸಮುದ್ರದಲ್ಲಿ ಉಬ್ಬರ ಇಳಿತ ಕೂಡ ಜೋರಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಂಗಳೂರಲ್ಲಿ ಭಾರೀ ಮಳೆ, ಶಾಲಾ-ಕಾಲೇಜುಗಳಿಗೆ ರಜೆ.. ಮುಂಗಾರು ಆರ್ಭಟಕ್ಕೆ ಮೊದಲ ಬಲಿ

https://newsfirstlive.com/wp-content/uploads/2023/07/rain-death.jpg

Load More