/newsfirstlive-kannada/media/post_attachments/wp-content/uploads/2025/05/bng-rain6.jpg)
ಬೆಂಗಳೂರು: ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಇಂದಿನಿಂದ ಜೂನ್ 14ರವರೆಗೆ ಹವಾಮಾನ ಇಲಾಖೆ ಅಲರ್ಟ್ ಕೊಟ್ಟಿದೆ.
ಇದನ್ನೂ ಓದಿ:ಭರ್ಜರಿ ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಿದ NIACL.. ಒಟ್ಟು ಎಷ್ಟು ಹುದ್ದೆಗಳು ಇವೆ?
ಇಂದು ಉತ್ತರ ಕನ್ನಡ ಜಿಲ್ಲೆ ಹೊರತು ಪಡಿಸಿ ಉಳಿದ ಎಲ್ಲಾ 30 ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. 12ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ,ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲ್ಬುರ್ಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
13ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ 14 ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬೆಳಗಾವಿ,ಧಾರವಾಡ, ಹಾವೇರಿ, ಹಾಸನ ಮೈಸೂರಿಗೆ ಆರೆಂಜ್ ಅಲರ್ಟ್ ನೀಡಿದೆ. ಬೀದರ್,ಕಲ್ಬುರ್ಗಿ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ