ಹವಾಮಾನ ಇಲಾಖೆಯಿಂದ ರಾಜ್ಯದ ಕೆಲ ಜಿಲ್ಲೆಗಳಿಗೆ ಎಚ್ಚರಿಕೆ
ಇಂದು ಮತ್ತು ನಾಳೆ ಕರಾವಳಿಗೆ ರೆಡ್ ಅಲರ್ಟ್ ಘೋಷಣೆ
ಒಂದು ವಾರದಿಂದ ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರು
ಬೆಂಗಳೂರು: ಸಂಜೆಯಾಗುತ್ತಿದ್ದಂತೆ ಸಿಲಿಕಾನ್ ಸಿಟಿಗೆ ವರುಣ ಎಂಟ್ರಿ ಕೊಟ್ಟಿದ್ದಾರೆ. ಒಂದು ವಾರದಿಂದ ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣ ಇತ್ತು. ಹೀಗಾಗಿ ಈ ಹಿಂದೆ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ, ಉತ್ತರ ಒಳನಾಡು, ಮಲೆನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ಕೊಟ್ಟಿತ್ತು.
ಇದನ್ನೂ ಓದಿ: ಸಖತ್ತಾಗಿದೆ.. ಸೂಪರ್ ಆಗಿದೆ! ಸೋಷಿಯಲ್ ಮೀಡಿಯಾದಲ್ಲಿ ಮ್ಯಾಜಿಕ್ ಮಾಡ್ತಿದೆ ‘ದ್ವಾಪರ‘ ಸಾಂಗ್!
ಆದರೆ ಇಂದು ಸಂಜೆಯಾಗುತ್ತಿದ್ದಂತೆ ಸಿಲಿಕಾನ್ ಸಿಟಿಗೆ ವರುಣ ಎಂಟ್ರಿ ಕೊಟ್ಟಿದ್ದಾರೆ. ದಿಢೀರ್ ಮಳೆಯಿಂದ ವಾಹನ ಸವಾರರು ರಸ್ತೆ ಮಧ್ಯೆ ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ. ಕೆಆರ್ ಮಾರುಕಟ್ಟೆ, ಜೆಸಿ ರಸ್ತೆ, ಮೆಜೆಸ್ಟಿಕ್, ಎಂ.ಜಿ ರೋಡ್, ಬನಶಂಕರಿ, ಬಸವನಗುಡಿ, ಜಯನಗರ, ಕೋರಮಂಗಲ, ಗಿರಿನಗರ, ವಿಜಯನಗರ, ಮಲ್ಲೇಶ್ವರಂ, ಸೌತ್ ಎಂಡ್ ಸರ್ಕಲ್ ಸೇರಿದಂತೆ ಹಲವು ಕೆಡೆ ಧಾರಾಕಾರವಾಗಿ ಮಳೆಯಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಇನ್ನೂ ಎಷ್ಟು ದಿನ ಭರ್ಜರಿ ಮಳೆ.. ಬೆಂಗಳೂರಿಗೆ ಬಿಸಿಲು ಬರೋದು ಯಾವಾಗ ಗೊತ್ತಾ..?
ಇಂದಿನಿಂದ 5 ದಿನಗಳವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ. ಇಂದು, ನಾಳೆ ಕರಾವಳಿಗೆ ರೆಡ್ ಅಲರ್ಟ್ ವಿಸ್ತರಣೆ ಆಗಲಿದೆ. ಕಳೆದ ಒಂದು ವಾರದಿಂದ ಕರಾವಳಿ ಭಾಗದಲ್ಲಿ ಮಳೆ ಭಾರೀ ಅಬ್ಬರಿಸುತ್ತಿದೆ. ಹೀಗಾಗಿ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿಗೆ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ರೆ, ಬೀದರ್, ಯಾದಗಿರಿ, ಕಲಬುರಗಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಮುಂದಿನ ಮೂರ್ನಾಲ್ಕು ದಿನ ಇದೇ ವಾತವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ