newsfirstkannada.com

ಇಂದಿನಿಂದ ಒಂದು ವಾರ ರಾಜ್ಯದ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ; ಹವಾಮಾನ ಇಲಾಖೆಯಿಂದ ಭಾರೀ ಎಚ್ಚರಿಕೆ!

Share :

Published May 9, 2024 at 6:11pm

Update May 9, 2024 at 6:15pm

    ತುಮಕೂರು, ಶಿವಮೊಗ್ಗ, ಯಾದಗಿರಿ, ಬಳ್ಳಾರಿ ಸೇರಿದಂತೆ ಹಲವೆಡೆ ಭಾರೀ ಮಳೆ

    ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸಾಧ್ಯತೆ

    ಬಿರು ಬಿಸಿಲಿನಿಂದ ಹೈರಾಣಾಗಿದ್ದ ಜನರಿಗೆ ಮಳೆರಾಯನಿಂದ ಈಗ ಕೂಲ್​​ ಕೂಲ್​

ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಷ್ಟು ದಿನ ಬಿರು ಬಿಸಿಲಿನಿಂದ ಹೈರಾಣಾಗಿದ್ದ ಜನರಿಗೆ ಮಳೆರಾಯ ಕೂಲ್​​ ಮಾಡಿದ್ದಾನೆ. ದಕ್ಷಿಣ ಒಳನಾಡಿನಲ್ಲಿ ವಾಡಿಕೆ ಪೂರ್ವ ಮುಂಗಾರು ಶುರುವಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ವರುಣನ ಆರ್ಭಟ; ಧಾರಾಕಾರ ಮಳೆಯಿಂದ ವಾಹನ ಸವಾರರ ಪರದಾಟ; ಎಲ್ಲೆಲ್ಲಿ ಏನಾಯ್ತು?

ಮೇ 11 ರಿಂದ 17ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದು ಸಹ ಸಾಧಾರಣ ಮಳೆ ಆಗುವ ನಿರೀಕ್ಷೆ ಇದೆ. ಗಾಳಿ, ಗುಡುಗು ಸಹಿತ ಮಳೆ ಬೀಳಲಿದೆ ಎಂದು ಎಚ್ಚರಿಕೆ ಹವಾಮಾನ ‌ಇಲಾಖೆ ಎಚ್ಚರಿಕೆ ನೀಡಿದೆ. ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಈಗಾಗಲೇ ತುಮಕೂರು, ಶಿವಮೊಗ್ಗ, ಯಾದಗಿರಿ, ಬಳ್ಳಾರಿ, ಮೈಸೂರು, ಮಂಡ್ಯ, ಚಾಮರಾಜನಗರದಲ್ಲಿ ಭಾರೀ ಮಳೆಯಾಗಿದ್ದು.

ಮುಂದಿನ ಕೆಲವು ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ರಾಮನಗರ, ಹಾಸನ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಘಾಟ್​​ಗಳಲ್ಲಿ ಹಾಗೂ ಚಿಕ್ಕಮಗಳೂರಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಕೆ ಕೊಟ್ಟಿದೆ. ಸದ್ಯ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಯಾವ ಸಂದರ್ಭದಲ್ಲಿಯೂ ಕೂಡ ಮಳೆ ಬೀಳುವ ಸಾಧ್ಯತೆ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇಂದಿನಿಂದ ಒಂದು ವಾರ ರಾಜ್ಯದ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ; ಹವಾಮಾನ ಇಲಾಖೆಯಿಂದ ಭಾರೀ ಎಚ್ಚರಿಕೆ!

https://newsfirstlive.com/wp-content/uploads/2024/05/rain24.jpg

Load More