/newsfirstlive-kannada/media/post_attachments/wp-content/uploads/2023/12/BNG_RAIN-5-1.jpg)
ಬೆಂಗಳೂರು: ಅಕ್ಟೋಬರ್ 15 ಅಂದರೆ ನಾಳೆಯಿಂದ ರಾಜ್ಯದಲ್ಲಿ ಮಳೆಯ ಪ್ರಮಾಣದಲ್ಲಿ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ಈಗಾಗಲೇ ರಾತ್ರಿಯಿಂದಲೇ ಸಾಧಾರಣ ಮಳೆ ಆಗುತ್ತಿದೆ. ಇದೇ ಮಳೆ ನಾಳೆಯಿಂದ ಭಾರೀ ಪ್ರಮಾಣದಲ್ಲಿ ಸುರಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಧಿಕಾರಿಗಳು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 15 ರಿಂದ 17ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ ತಿಳಿಸಲಾಗಿದೆ.
ಇದನ್ನೂ ಓದಿ: ‘ಒಳಗೆ ಕುಳಿತವನದ್ದೇ ಕುರ್ಚಿ, ಒದ್ದವನದ್ದೇ ಚೆಂಡು’-ಡಿ.ಕೆ ಶಿವಕುಮಾರ್
/newsfirstlive-kannada/media/post_attachments/wp-content/uploads/2024/05/BNG_RAIN-1.jpg)
ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರಕ್ಕೆ ಅಕ್ಟೋಬರ್ 17 ರಂದು ಭಾರೀ ಮಳೆಯಾಗಲಿದೆ. ಕರಾವಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿದಂತೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಚಿತ್ರದುರ್ಗ, ದಾವಣಗೆರೆ, ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ.
ಕಲಬುರಗಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾದ್ರೆ, ಹೊನ್ನಾವರದಲ್ಲಿ 4.4 ಎಂ.ಎಂ ಮಳೆ ಆಗಲಿದೆ. ಬೆಂಗಳೂರು ನಗರದಲ್ಲಿ 2.7 ಎಂ.ಎಂ ಮಳೆ ಬೀಳಲಿದೆ. ಇನ್ನು ಬೆಂಗಳೂರಿನ ಹೆಚ್​​ಎಎಲ್ ಏರ್​ಪೋರ್ಟ್​ ಬಳಿ 1.6 ಎಂ.ಎಂ ಮಳೆ ಸುರಿಯಲಿದೆ. ಇದರ ಜೊತೆಗೆ ಮಂಗಳೂರು ವಿಮಾನ ನಿಲ್ದಾಣ ಬಳಿ ಗುಡುಗು, ಗಾಳಿ ಸಹಿತ 2.2 ಎಂಎಂ ಮಳೆ ಬೀಳುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us