ರಾಜ್ಯದಲ್ಲಿ ಮುಂಗಾರು ಮಳೆ ಜೋರು.. ಮಳೆಯ ಆರ್ಭಟಕ್ಕೆ ಯಾವೆಲ್ಲ ಜಿಲ್ಲೆಗಳಲ್ಲಿ ಏನೆಲ್ಲ ಆಗಿದೆ..?

author-image
Ganesh
Updated On
ಇಂದಿನಿಂದ 5 ದಿನಗಳ ಕಾಲ ಭಾರೀ ಮಳೆ; ರಾಜ್ಯದ ಯಾವೆಲ್ಲಾ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ
Advertisment
  • ಬೆಳಗಾವಿಯಲ್ಲಿ ಕೊಚ್ಚಿಹೋದ ಆಟೋ ಚಾಲಕ
  • ಉಡುಪಿಯಲ್ಲಿ ಶಾಲೆಗಳಿಗೆ ರಜೆ ಘೋಷಣೆ
  • ರಾಯಚೂರಲ್ಲಿ ಬೆಳ್ಳಂಬೆಳಗ್ಗೆ ಮಳೆಯ ಆರ್ಭಟ

ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಧಾರವಾಡದಲ್ಲಿ ರೆಡ್ ಅಲರ್ಟ್..
ಧಾರವಾಡದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆಯಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಇದನ್ನೂ ಓದಿ: ಭಾರೀ ಮಳೆಯ ಎಚ್ಚರಿಕೆ.. ರಾಜ್ಯದ 2 ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ..

publive-image

ಉಡುಪಿಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಇನ್ನು ಉಡುಪಿ ಜಿಲ್ಲೆಗೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ. ಮುಂಜಾಗೃತ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾರವಾರದಲ್ಲಿ ಭಯಂಕರ ಮಳೆ..

ಕಾರವಾರದಲ್ಲೂ ಮಳೆ ಮುಂದುವರಿದಿದೆ. ನಗರದ ಗ್ರೀನ್ ಸ್ಟ್ರೀಟ್ ರಸ್ತೆ ಜಲಾವೃತಗೊಂಡಿದೆ. ರಸ್ತೆಯೇ ಮೇಲೆ ಮಳೆಯ ನೀರು ಹರಿಯುತ್ತಿದೆ. ನಗರದ ಹಬ್ಬುವಾಡ ರಸ್ತೆ, ಕೋಡಿಭಾಗ ರಸ್ತೆ, ಕೆಇಬಿ ರಸ್ತೆಯ ಕೆಲವೆಡೆ ಜಲಾವೃತಗೊಂಡಿವೆ. ಹಲವೆಡೆ ಮನೆಗಳಿಗೆ ಚರಂಡಿ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಇದನ್ನೂ ಓದಿ: ಹಾಸ್ಟೆಲ್​​ನಲ್ಲಿದ್ದ 24 ಭಾವಿ ವೈದ್ಯರೂ ಸೇರಿ 265 ಮಂದಿಯ ಜೀವ ತೆಗೆದ ವಿಮಾನ ದುರಂತ..

publive-image

ಬೆಳಗಾವಿಯಲ್ಲಿ ಧಾರಾಕಾರ ಮಳೆಗೆ ಬೆಳಗಾವಿ ಅವಾಂತರ ಸೃಷ್ಟಿಯಾಗಿದೆ. ಜಿಲ್ಲೆಯ ಬೈಲಹೊಂಗಲ, ಗೋಕಾಕ, ಖಾನಾಪುರ ಪಟ್ಟಣದಲ್ಲಿ ಭಾರೀ ಮಳೆ ಸುರಿದಿದೆ. ಬೈಲಹೊಂಗಲ ಪಟ್ಟಣದಲ್ಲಿರುವ ಕ್ಲಿನಿಕ್ ಒಳಗೆ ಮಳೆ ನೀರು ನುಗ್ಗಿದೆ.

ಕೊಚ್ಚಿ ಹೋದ ಆಟೋ ಚಾಲಕ..

ಬೆಳಗಾವಿಯಲ್ಲಿ ಸುರಿದ ಧಾರಾಕಾರ ಮಳೆಗೆ ಆಟೋಚಾಲಕನೊಬ್ಬ ಕೊಚ್ಚಿ ಹೋಗಿದ್ದಾನೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಚಿಕ್ಕಬೂದನೂರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಳೆರಾಯನ ಅರ್ಭಟದಿಂದ ರಾತ್ರಿ 8 ಗಂಟೆ ಸುಮಾರಿಗೆ ಚಿಕ್ಕಬೂದನೂರ ಗ್ರಾಮದ ಹಳ್ಳಕೊಳ್ಳಗಳು ತುಂಬಿ ಹರಿದಿವೆ. ಆಟೋ ಚಾಲಕ ನೀರಿನಲ್ಲಿ ದಾಟುವಾಗ ನೀರಿನ ರಭಸಕ್ಕೆ ಕೊಚ್ಚಿಕ್ಕೊಂಡು ಹೋಗಿದ್ದಾನೆ. ಆಟೋದಲ್ಲಿ ಪ್ರಯಾಣಿಕರಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

publive-image

ರಾಯಚೂರಲ್ಲೂ ಬೆಳ್ಳಂಬೆಳಗ್ಗೆ ಮಳೆರಾಯ ಎಂಟ್ರಿ ನೀಡಿದ್ದಾನೆ. ಅದೇ ರೀತಿ ಮಲೆನಾಡು ಭಾಗದಲ್ಲೂ ಭಾರೀ ಮಳೆಯಾಗುತ್ತಿದೆ.

ಇದನ್ನೂ ಓದಿ: ದುರಂತದಲ್ಲಿ ಜೀವ ಕಳೆದುಕೊಂಡ ಕುಟುಂಬಕ್ಕೆ ತಲಾ ಒಂದು ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್​..

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment