/newsfirstlive-kannada/media/post_attachments/wp-content/uploads/2023/06/BNG_RAIN-3.png)
ಬೆಂಗಳೂರು: ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿ ಮಂದಿಗೆ ತಡರಾತ್ರಿ ಮಳೆರಾಯ ತಂಪೆರೆದಿದ್ದಾನೆ. ಅಲ್ಲದೇ ಬಿರುಗಾಳಿ ಸಹಿತ ಅಬ್ಬರಿಸಿದ ಮಳೆಯಿಂದ ಬೃಹತ್ ಮರಗಳು ಉರುಳಿಬಿದ್ದು ಅವಾಂತರವೇ ಸೃಷ್ಟಿಸಿದೆ. ಮರ ಬಿದ್ದ ಪರಿಣಾಮ ಕಾರು ಮತ್ತು ಬೈಕ್ ಜಖಂಗೊಂಡಿದೆ.
ಇದನ್ನೂ ಓದಿ:ತಂಪೆರೆದ ಮಳೆ, ಭೂಮಿಗೆ ಬಂತು ಜೀವಕಳೆ.. ಕರ್ನಾಟಕದಲ್ಲಿ ಎಲ್ಲೆಲ್ಲಿ ಮಳೆ ಆಗ್ತಿದೆ..?
ಇದೀಗ ರಾಜ್ಯದ ಜನತೆಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯೊಂದನ್ನು ಕೊಟ್ಟಿದೆ. ಕರಾವಳಿ ಸೇರಿದಂತೆ ಒಟ್ಟು 14 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಹೀಗಾಗಿ 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ವಿಜಯನಗರ, ತುಮಕೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಇನ್ನೂ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲೂ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಲ್ಲದೇ ಮುಂದಿನ ಮೂರು ದಿನ ಬೆಂಗಳೂರಿನಲ್ಲಿ ಮಳೆಯಾಗಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ