/newsfirstlive-kannada/media/post_attachments/wp-content/uploads/2025/06/UDP-RAIN.jpg)
ಉಡುಪಿ/ಚಿಕ್ಕಮಗಳೂರು: ಕರಾವಳಿ ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಮಾಡಲಾಗಿದೆ.
ಕಳೆದ 24 ಗಂಟೆಯಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗ್ತಿದ್ದು, ನಗರದ ಹಲವೆಡೆ ಇರುವ ತಗ್ಗು ಪ್ರದೇಶಗಳಲ್ಲಿ ನೆರೆಯ ಆತಂಕ ಎದುರಾಗಿದೆ. ಬೈಂದೂರು, ಕುಂದಾಪುರ ಭಾಗದಲ್ಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ..
ಮಧ್ಯಾಹ್ನದ ವೇಳೆ ಗಾಳಿಯ ವೇಗ ಮತ್ತಷ್ಟು ಹೆಚ್ಚಾಗುವ ಸೂಚನೆ ಸಿಕ್ಕಿದೆ. ಗಂಟೆಗೆ 45 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ನದಿಪಾತ್ರ ಹಾಗೂ ಸಮುದ್ರ ಪಾತ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಬೈಂದೂರು ಭಾಗದ ನದಿಪಾತ್ರದ ನಿವಾಸಿಗಳಲ್ಲಿ ಆತಂಕ ಎದುರಾಗಿದೆ. ಜಿಲ್ಲಾಡಳಿತವು 1077 ಟೋಲ್ ಫ್ರೀ ಸಂಖ್ಯೆಯನ್ನು ನೀಡಿದೆ.
ಇದನ್ನೂ ಓದಿ: ಮಳೆಯ ಎಚ್ಚರಿಕೆ.. ರಾಜ್ಯದ 6 ಜಿಲ್ಲೆಗಳಲ್ಲಿ ಭರ್ಜರಿ ಮಳೆ ಎಂದ ಹವಾಮಾನ ಇಲಾಖೆ..
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆಯ ಅಬ್ಬರ ಜೋರಾಗಿದೆ. ಮಳೆಯಿಂದಾಗಿ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ನಗರ ಕದ್ರಿ ಕೈಬಟ್ಟಲ್ ಎಂಬಲ್ಲಿ ಮನೆಯ ಒಂದು ಭಾಗ ಕುಸಿತವಾಗಿದೆ. ಉಷಾ ಅಶೋಕ್ ಅನ್ನೋರಿಗೆ ಸೇರಿದ ಮನೆ ಇದಾಗಿದೆ. ಮನೆಯ ಅಡುಗೆ ಕೋಣೆಯಲ್ಲಿ ಗೋಡೆ ಕುಸಿತವಾಗಿದೆ. ಅದೃಷ್ಟವಶಾತ್ ಯಾವುದೇ ಜೀವ ಹಾನಿಯಾಗಿಲ್ಲ.
ಇನ್ನು, ಮಲೆನಾಡು ಶಿವಮೊಗ್ಗದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಭಾರೀ ಮಳೆಗೆ ತಾಲೂಕಿನ ಆಡುಗಡಿ ಗ್ರಾಮದಲ್ಲಿ ಗೋಡೆ ಕುಸಿದು 98 ವರ್ಷದ ವೃದ್ಧೆ ಪ್ರಾಣ ಕಳೆದುಕೊಂಡಿದ್ದಾರೆ. ದುರ್ಘಟನೆಯಲ್ಲಿ ಹೇಮಾವತಿ ಅನ್ನೋರಿಗೆ ಗಂಭೀರ ಗಾಯವಾಗಿದೆ. ಉಳಿದಂತೆ ಪರಶುರಾಮ್, ಪಲ್ಲವಿ ಹಾಗೂ ಚೇತನ್ ಅನ್ನೋರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಾಳುಗಳಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಸೇತುವೆ ಮೇಲೆ ನಿಂತು ನೋಡುವಾಗಲೇ ನದಿಗೆ ಬಿದ್ದ ಬ್ರಿಡ್ಜ್.. ಇಬ್ಬರು ನಿಧನ, ಕಾಣೆ ಆದವರಿಗಾಗಿ ಹುಡುಕಾಟ
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ