ನದಿಯಲ್ಲಿ ತೇಲಿ ಬರ್ತಿವೆ ಶವಗಳು.. 200 ಮನೆಗಳು ಅಪ್ಪಚ್ಚಿ.. ಕೇರಳದ ಮಹಾ ದುರಂತದ ಫೋಟೋಗಳು..!

author-image
Veena Gangani
Updated On
ನದಿಯಲ್ಲಿ ತೇಲಿ ಬರ್ತಿವೆ ಶವಗಳು.. 200 ಮನೆಗಳು ಅಪ್ಪಚ್ಚಿ.. ಕೇರಳದ ಮಹಾ ದುರಂತದ ಫೋಟೋಗಳು..!
Advertisment
  • ಕೇರಳ ಭೂಕುಸಿತದಲ್ಲಿ ಸಾವನ್ನಪ್ಪಿರುವ ಸಂಖ್ಯೆ 42ಕ್ಕೆ ಏರಿಕೆ
  • ಭೂಕುಸಿತದ ಸ್ಥಳದಲ್ಲಿ ತೀವ್ರ ಕಾರ್ಯಾಚರಣೆ ನಡೆಸ್ತಿರುವ ರಕ್ಷಣಾ ಸಿಬ್ಬಂದಿ
  • ಕೇರಳ ಸಿಎಂಗೆ ಮೋದಿ, ರಾಹುಲ್ ಗಾಂಧಿ ಕರೆ ಮಾಡಿ ಮಾತುಕತೆ

ಕೇರಳದ ವಯನಾಡಿನಲ್ಲಿ ಮಳೆಯಿಂದಾಗಿ ಭಾರೀ ಭೂ-ಕುಸಿತ ಸಂಭವಿಸಿದ್ದು ಸಾವಿನ ಸಂಖ್ಯೆ 42ಕ್ಕೆ ಏರಿಕೆ ಆಗಿದೆ. ಜೊತೆಗೆ ಮಣ್ಣಿನ ಅಡಿಯಲ್ಲಿ ನೂರಾರು ಮಂದಿ ಜೀವಂತ ಸಮಾಧಿ ಆಗಿರುವ ಆತಂಕ ವ್ಯಕ್ತವಾಗುತ್ತಿದೆ.

publive-image

ಭಯಾನಕ ಭೂಕುಸಿತಕ್ಕೆ ಕೇರಳ ಅಕ್ಷರಶಃ ತತ್ತರಿಸಿ ಹೋಗಿದೆ. ಮಂಗಳವಾರ ಮುಂಜಾನೆ ಮುಂಡಕ್ಕೈ (Mundakkai), ಚೂರಲ್ಮಲಾ (Chooralmala), ಅಟ್ಟಮಾಲಾ ( Attamala) ಮತ್ತು ನೂಲ್ಪುಝಾ (Noolpuzha) ಗ್ರಾಮದಲ್ಲಿ ಭೂಕುಸಿತ ಆಗಿದೆ. ಒಟ್ಟು ಮೂರು ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಭಾರೀ ಸಾವು ನೋವು ಸಂಭವಿಸಿದೆ. ಮುಂಡಕ್ಕೈ ಮತ್ತು ಚೂರಲ್ಮಲಾ ಪ್ರದೇಶವು ಅಕ್ಷರಶಃ ಗುರುತೇ ಸಿಗದಂತಾಗಿದೆ.

ಇದನ್ನೂ ಓದಿ:ಗುರುತೇ ಸಿಗದ ಊರು.. ಮಣ್ಣಿನಡಿಯಲ್ಲಿ ನೂರಾರು ಜನ.. ಸ್ಮಶಾನದಂತಾದ ವಯನಾಡ್​​

publive-image

ದೇವರ ನಾಡು ರಕ್ಕಸ ಮಳೆಯಾರ್ಭಟಕ್ಕೆ ಸ್ಮಶಾನವಾಗಿದೆ. ಭೂಕುಸಿತದ ಪರಿಣಾಮ ಮರಗಳು, ಮಣ್ಣು, ಮನೆಗಳನ್ನು ತೊಯ್ದುಬಿಟ್ಟಿವೆ. ಸ್ಥಳದಲ್ಲಿ ರಕ್ಷಣಾ ತಂಡಗಳು ಕಾರ್ಯ ನಿರ್ವಹಿಸುತ್ತಿವೆ. ಅಗ್ನಿಶಾಮಕ ದಳ, ಎನ್​ಡಿಆರ್​ಎಫ್​ ಮತ್ತು ಸ್ಥಳೀಯ ತಂಡಗಳು ಸೇರಿ ಸುಮಾರು 250 ಜನರು ರಕ್ಷಣೆ ಮಾಡಲು ಮುಂದಾಗಿದ್ದಾರೆ. ಭೀಕರ ಭೂಕುಸಿತದಲ್ಲಿ ಸಾವನ್ನಪ್ಪಿದವರ ಮೃತದೇಹಗಳು ನದಿಯಲ್ಲಿ ತೇಲಿ ಹೋಗುತ್ತಿವೆ. 200ಹೆಚ್ಚು ಮನೆಗಳು ಭೂ ಕುಸಿತಕ್ಕೆ ಹಾನಿಯಾಗಿವೆ.

publive-image

ಅಲ್ಲಿನ ಜನರಿಗೆ ಸಹಾಯ ಮಾಡಲು ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗಿದೆ. ಭೂಕುಸಿತದಲ್ಲಿ ಗಾಯಗೊಂಡ 50 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಡಕ್ಕೈ ಟೌನ್‌ನಲ್ಲಿ ರಾತ್ರಿ 1 ಗಂಟೆ ಸುಮಾರಿಗೆ ಭಾರೀ ಮಳೆಯ ಸಂದರ್ಭದಲ್ಲಿ ಮೊದಲ ಭೂಕುಸಿತ ಸಂಭವಿಸಿದೆ.

publive-image

ಇದನ್ನೂ ಓದಿ:ಭೀಕರ ಭೂಕುಸಿತ.. ಮೃತರ ಸಂಖ್ಯೆ 24ಕ್ಕೆ ಏರಿಕೆ.. ನೂರಾರು ಮಂದಿ ಜೀವಂತ ಸಮಾಧಿ ಆಗಿರುವ ಆತಂಕ..

ಮುಂಡಕ್ಕೈನಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಮುಂಜಾನೆ 4 ಗಂಟೆ ಸುಮಾರಿಗೆ ಚುರಲ್ ಮಾಳದ ಶಾಲೆಯೊಂದರ ಬಳಿ ಎರಡನೇ ಭೂಕುಸಿತ ಸಂಭವಿಸಿದೆ. ಶಾಲೆಯ ಸುತ್ತಮುತ್ತಲಿನ ಮನೆಗಳು, ಅಂಗಡಿಗಳು ಗುಡ್ಡ ಕುಸಿತದಿಂದ ನಾಶ ಆಗಿವೆ.

publive-image

ತುರ್ತು ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆ 9656938689 ಮತ್ತು 8086010833 ನೀಡಲಾಗಿದೆ. ಜೊತೆಗೆ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಎಂಐ -17 ಮತ್ತು ಒಂದು ಎಎಲ್‌ಹೆಚ್, ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಕಚೇರಿ (CMO) ತಿಳಿಸಿದೆ. ಗಂಭೀರವಾಗಿ ಗಾಯಗೊಂಡ ಜನರಿಗೆ ಚಿಕಿತ್ಸೆ ನೀಡುವಂತೆ ಎಲ್ಲಾ ಆಸ್ಪತ್ರೆಗಳಿಗೆ ಎಚ್ಚರಿಕೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

publive-image

ವೈತಿರಿ, ಕಲ್ಪಟ್ಟಾ, ಮೆಪ್ಪಾಡಿ ಮತ್ತು ಮಾನಂತವಾಡಿ ಆಸ್ಪತ್ರೆಗಳು ಸೇರಿದಂತೆ ಎಲ್ಲಾ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನೀಡಲು ಸಂಪೂರ್ಣ ಸನ್ನದ್ಧವಾಗಿವೆ. ರಾತ್ರಿಯಿಂದಲೇ ಎಲ್ಲಾ ಆರೋಗ್ಯ ಸೌಲಭ್ಯಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿವೆ. ವಯನಾಡಿನಲ್ಲಿ ಆರೋಗ್ಯ ಕಾರ್ಯಕರ್ತರ ಹೆಚ್ಚಿನ ತಂಡಗಳನ್ನು ನಿಯೋಜಿಸಲಾಗುವುದು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment