/newsfirstlive-kannada/media/post_attachments/wp-content/uploads/2024/05/Heavy-Rains-Karnataka.jpg)
ಬೆಂಗಳೂರು: ನಾಳೆಯಿಂದ ಡಿಸೆಂಬರ್ 28ರವರೆಗೂ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಹಲವು ಪ್ರದೇಶಗಳಲ್ಲಿ ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ.
ಎಲ್ಲೆಲ್ಲಿ ಮಳೆ?
ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದೇಶಾದ್ಯಂತ ಭಾರೀ ಚಳಿ
ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮಳೆ ಜೊತೆಗೆ ಚಳಿ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 30ವರೆಗೆ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿ ಇರಲಿದೆ.
ನಾಳೆ ಮಾತ್ರ ರಾಜ್ಯದ ಆಯ್ದ ಪ್ರದೇಶಗಳಲ್ಲಿ ಲಘು ಮಳೆಯಾಗಲಿದೆ. ನಾಡಿದ್ದು ದಕ್ಷಿಣ ಒಳನಾಡಿನ ಜಿಲ್ಲೆಗಳು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಲಘು ಮಳೆ ಬೀಳಬಹುದು. ಡಿಸೆಂಬರ್ 27ರ ವೇಳೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಇದನ್ನೂ ಓದಿ:ಚಾಂಪಿಯನ್ ಟ್ರೋಫಿ ವೇಳಾಪಟ್ಟಿ ಪ್ರಕಟ: ಭಾರತ-ಪಾಕ್ ಮುಖಾಮುಖಿ ಯಾವಾಗ? ಪಂದ್ಯ ಎಲ್ಲಿ?
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us