/newsfirstlive-kannada/media/post_attachments/wp-content/uploads/2025/05/Mangalore-Rain-1.jpg)
ಕರಾವಳಿ ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಅಂಗನವಾಡಿಯಿಂದ ಪ್ರೌಢಶಾಲೆಯವರೆಗೆ ರಜೆ ಘೋಷಣೆ ಮಾಡಿದ್ದಾರೆ. ಸಿಬಿಎಸ್‌ಸಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೂ ಕಡ್ಡಾಯ ರಜೆ ನೀಡಲು ಆದೇಶಿಸಿದ್ದಾರೆ.
ಇನ್ನು, ಉತ್ತರ ಕನ್ನಡ ಜಿಲ್ಲೆಯಲ್ಲೂ ಇಂದು ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಲಕ್ಷ್ಮೀ ಪ್ರಿಯಾ ಅವರು ಆದೇಶಿಸಿದ್ದಾರೆ.
ಇದನ್ನೂ ಓದಿ: ಆಸ್ತಿ ನೋಂದಣಿ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.. ಪ್ರಾಪರ್ಟಿ ನಿಮ್ಮದಾಗಲು ಈ ದಾಖಲೆಗಳು ಇರಲೇಬೇಕು
ಕರಾವಳಿಯಲ್ಲಿ ವರುಣ ಅಬ್ಬರಿಸುತ್ತಿರುವುದರಿಂದ ಹಲವೆಡೆ ತಗ್ಗು ಪ್ರದೇಶಕ್ಕೆ ಮಳೆ ನೀರು ನುಗ್ಗಿದೆ. ಮನೆಗಳ ಸುತ್ತ ನೀರು ನಿಂತ ಪರಿಣಾಮ ಕಾರವಾರ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಜನಜೀವನ ಅಸ್ಥವ್ಯಸ್ಥವಾಗಿದೆ. ಈ ಭಾಗದಲ್ಲಿ ಜೂನ್ 17ರವರೆಗೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ