/newsfirstlive-kannada/media/post_attachments/wp-content/uploads/2025/05/Bangalore-Rain-women-5-lack-1.jpg)
ಬೆಂಗಳೂರಿನ ಹಲವೆಡೆ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ವಿಧಾನಸೌಧ, ಕೆ.ಆರ್. ಸರ್ಕಲ್, ಮೆಜೆಸ್ಟಿಕ್, ಕಾರ್ಪೊರೇಷನ್ ಸರ್ಕಲ್, ಕೆ.ಆರ್ ಮಾರ್ಕೆಟ್ ಬಳಿ ವಾಹನ ಸಂಚಾರ ಅಸ್ತವ್ಯಸ್ಥವಾಗಿದೆ.
ಯಲಹಂಕದ ಸುತ್ತಮುತ್ತ ಬೆಳಗ್ಗೆಯಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ಎಂಟ್ರಿ ಕೊಟ್ಟಿದ್ದಾನೆ. ನಿನ್ನೆ ಸುರಿದ ಮಳೆಗೆ ಈಗಾಗಲೇ ಹಲವು ಅವಾಂತರಗಳಾಗಿವೆ. ಇವತ್ತೂ ಮಳೆಯಾದ್ರೆ ಮತ್ತಷ್ಟು ಅನಾಹುತ ಆಗುವ ಸಾಧ್ಯತೆ ಇದೆ.
ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು ಮಹಾನಗರಿ ತತ್ತರಿಸಿ ಹೋಗಿದೆ. ಹಲವೆಡೆ ಜನಜೀವನ ಅಸ್ತವ್ಯಸ್ಥವಾಗಿದ್ರೆ, ವೈಟ್‌ಫೀಲ್ಡ್‌ನಲ್ಲಿ ಗೋಡೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಮಹದೇವಪುರದ ಚನ್ನಸಂದ್ರದಲ್ಲಿ ಇಂದು ಬೆಳಗ್ಗೆ ಈ ದಾರುಣ ಘಟನೆ ನಡೆದಿದೆ. 35 ವರ್ಷದ ಶಶಿಕಲಾ ಮಳೆಗೆ ಬಲಿಯಾದ ಮಹಿಳೆ. ಶಶಿಕಲಾ ಅವರಿಗೆ ಇಬ್ಬರು ಚಿಕ್ಕ ಮಕ್ಕಳು ಇದ್ದಾರೆ. ಗಂಡ ಕೂಲಿ ಕೆಲಸ ಮಾಡುತ್ತಾ ಇದ್ದಾರೆ.
ಯಾದಗಿರಿ ಜಿಲ್ಲೆ ಶಹಾಪುರ ಮೂಲದವರಾದ ಶಶಿಕಲಾ, ಐ ಝಡ್ ಕಂಪನಿಯಲ್ಲಿ ಹೌಸ್ ಕೀಪಿಂಗ್ ಕೆಲಸಕ್ಕೆ ಹೋಗಿದ್ದರು. ಕೆಲಸದ ಸ್ಥಳದಲ್ಲಿದ್ದ ಕಾಂಪೌಂಡ್ ಗೋಡೆ ಕುಸಿದು ಶಶಿಕಲಾ ಸಾವನ್ನಪ್ಪಿದ್ದಾರೆ. ಇಡೀ ರಾತ್ರಿ ಸುರಿದ ಮಳೆಗೆ ಗೋಡೆ ನೆನೆದಿದ್ದರಿಂದ ಶಶಿಕಲಾ ಅವರ ಮೇಲೆ ಬಿದ್ದಿದೆ.
ಇದನ್ನೂ ಓದಿ: ಒಂದೇ ದಿನದ ಮಳೆ.. ಬೆಂಗಳೂರು ಸಾಯಿ ಲೇಔಟ್ ಜನರ ರಕ್ಷಣೆಗೆ ಹರಸಾಹಸ; ಪರಿಸ್ಥಿತಿ ಹೇಗಿದೆ ಗೊತ್ತಾ?
ಘಟನಾ ಸ್ಥಳಕ್ಕೆ ಮಹದೇವಪುರ ಪೊಲೀಸರು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಶಶಿಕಲಾ ಕುಟುಂಬಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ