ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ
ಗುಡುಗು ಮಿಂಚು ಸಹಿತ ಜೋರು ಮಳೆಯಾಗುವ ಸಾಧ್ಯತೆ
ಸಿಲಿಕಾನ್ ಸಿಟಿಯಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನ ನಿರಂತರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಮತ್ತು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ಹೇಳಿದೆ.
ವಿಜಯಪುರ ಜಿಲ್ಲೆಯ ನಾಗತಿಬಸಾಪುರ, ಹಾಸನ ಜಿಲ್ಲೆಯ ಜಂಬೂರು, ಚಿಕ್ಕಮಗಳೂರು ಜಿಲ್ಲೆಯ ಮೇಲಿನ ಹುಲುವತ್ತಿ, ಯಲಗತವಳಿ, ಶಾಂತಿಗ್ರಾಮ, ಹಲಸುಲಿಗೆ, ಬೈಲಹಳ್ಳಿ, ಉಡುಪಿ ಜಿಲ್ಲೆಯ ಮೊಲಹಳ್ಳಿ, ತಲ್ಲೂರು, ಗುಜ್ಜಾಡಿ, ವಡ್ಡರ್ಸೆ, ಕಡೆಕರ್, ಕುಚ್ಚೂರು, ತುಳುವಿನಕೊಪ್ಪ, ತ್ರಿಪುರ, ದಾಸರಹಳ್ಳಿ, ಚಿಕ್ಕಂಗಲದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯಪುರ, ದಾವಣಗೆರೆ, ಶಿವಮೊಗ್ಗ, ತುಮಕೂರಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಜೊತೆಗೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗಲಿದೆ. ಇಂದು ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ತಮಿಳುನಾಡಿನ 9 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ