newsfirstkannada.com

ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ..? ಎಲ್ಲೆಲ್ಲಿ ರೆಡ್​ ಅಲರ್ಟ್ ಘೋಷಣೆ​..?

Share :

Published July 24, 2023 at 7:08pm

    ಸಿಲಿಕಾನ್​ ಸಿಟಿಯಲ್ಲಿ ಮಳೆರಾಯನ ಆರ್ಭಟ ಜೋರು..!

    ಕರಾವಳಿ ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

    ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ ಸಾಧ್ಯತೆ!

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಮಳೆರಾಯನ ಆರ್ಭಟ ಜೋರಾಗಿದೆ. ನಗರದ ಹಲವೆಡೆ ಎಡಬಿಡದೆ ಜಿಟಿ ಜಿಟಿ ಮಳೆಯಾಗುತ್ತಿದೆ. ಧೀಡಿರ್​ ಮಳೆಯಿಂದ ನಗರದ ನಿವಾಸಿಗಳು ಹೈರಾಣಾಗಿದ್ದಾರೆ. ಜೊತೆಗೆ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಇನ್ನು, ಕರಾವಳಿ ಹಾಗೂ ದಕ್ಷಿಣ ಕನ್ನಡ, ಉಡುಪಿ ಭಾಗದ ಹಲವು ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪಶ್ಚಿಮ, ಹಾಗೂ ಮಲೆನಾಡು ಭಾಗದ ಜಿಲ್ಲೆಗಳಿಗೆ ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಹಲವು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದ್ದು, ನಾಳೆಯೂ ಕೂಡ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಇದರ ಜೊತೆಗೆ ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ 26 ರಿಂದ 28 ರಂದು  ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ.

ಇನ್ನು, ರಾಮನಗರ, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಕಾಲಕ್ರಮೇಣ ಮಳೆ ಕಡಿಮೆ ಆಗುತ್ತಿದೆ. ಕೋಟೆನಾಡು ಚಿತ್ರದುರ್ಗದಲ್ಲಿ ಈ ಬಾರಿ ಅತೀ ಹೆಚ್ಚು ಮಳೆಯಾಗಿದೆ ಎಂದು ನ್ಯೂಸ್​ಫಸ್ಟ್ ಜೊತೆ ರಾಜ್ಯ ಹವಾಮಾನ ಇಲಾಖೆಯ ವಿಜ್ಞಾನಿ ಹಾಗೂ ಹವಾಮಾನ ತಜ್ಞ ಎ ಪ್ರಸಾದ್ ಮಾಹಿತಿ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ..? ಎಲ್ಲೆಲ್ಲಿ ರೆಡ್​ ಅಲರ್ಟ್ ಘೋಷಣೆ​..?

https://newsfirstlive.com/wp-content/uploads/2023/07/rain-9-2.jpg

Load More